ಪುತ್ತೂರು : ಬಿಜೆಪಿಯಿಂದ ಬಂಡಾಯ ಎದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ಕಳುಹಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಇದೀಗ ಸಂಘ ಪರಿವಾರಕ್ಕೆ ಸಡ್ಡು ಹೊಡೆಯಲು ಮತ್ತೊಂದು ಸಂಘಟನೆ ರೂಪುಗೊಂಡಿದೆ. ಪುತ್ತಿಲ ಪರಿವಾರ ಹೆಸರಿನಲ್ಲಿ ಹೊಸ ಸಂಘಟನೆ ಇಂದು ಲೋಕಾರ್ಪಣೆಗೊಂಡಿದೆ.
ಇಂದು ನಡೆದ ಪುತ್ತಿಲ ಬೆಂಬಲಿಗರ ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಪಾದಯಾತ್ರೆ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಈ ಹೊಸ ಸಂಘಟನೆ ಹುಟ್ಟುಕೊಂಡಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದಂತೆ ಈ ಹೊಸ ಸಂಘಟನೆ ಕಾರ್ಯ ನಿರ್ವಹಿಸಲಿದ್ದು, ಆರ್.ಎಸ್.ಎಸ್ ನ ಗುರು ಗೋವಳ್ಕರ್ ಆಶಯದಂತೆ ಪುತ್ತಿಲ ಪರಿವಾರ ಸಂಘ ಕಾರ್ಯ ನಿರ್ವಹಿಸಲಿದೆ ಎಂದು ಸಭೆಯಲ್ಲಿ ಪರಿವಾರದ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಅರುಣ್ ಪುತ್ತಿಲ ಮತ್ತೊಮ್ಮೆ ತಮ್ಮ ಸಂಘಟನಾ ಚಾತುರ್ಯ ತೋರಿಸಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಸದ್ಯ ಪುತ್ತೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಮತ್ತು ಪುತ್ತಿಲರ ನಡುವಿನ ಜಟಾಪಟಿ ಮುಂದಿನ ದಿನಗಳಲ್ಲಿ ಯಾವ ಮಟ್ಟಕ್ಕೆ ತಲುಪಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…