Featured

ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ : ರೇಣುಕಾಚಾರ್ಯ ಆಕ್ರೋಶ – Vishwanews24

ಪಕ್ಷದ ಕಾರ್ಯಕರ್ತರಿಗೆ ಮುಖಂಡರಿಗೆ ಹಿಂದೂ ಯುವಕರಿಗೆ ಮನವಿ ಹಾಗೂ ಕ್ಷಮೆಯಾಚಿಸುತ್ತೇನೆ..

ಸಿಎಂ ಬೊಮ್ಮಾಯಿ ಅವರಿಗೆ ಈ ಪ್ರಕರಣದಿಂದ ಆಘಾತವಾಗಿದೆ..

ಎನ್‍ಕೌಂಟರ್ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕಬೇಕು..

ಗೃಹ ಸಚಿವರ ವೈಫಲ್ಯದ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುವುದಿಲ್ಲ..

ಹಿಂದೂ ಯುವಕರು ಬಲೆ ತೊಟ್ಟಿಕೊಂಡಿಲ್ಲ..

ಎಲ್ಲರೂ ರಾಜೀನಾಮೆ ವಾಪಸ್ಸು ಪಡೆಯಬೇಕು ಎಂದು ರೇಣುಕಾಚಾರ್ಯ ಮನವಿ

ದಾವಣಗೆರೆ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ ಆಯ್ತು ಎಂದು ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರಹಾಕಿದರು.

ಗೃಹ ಸಚಿವರ ಮನೆ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ಮುತ್ತಿಗೆ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಮುಖಂಡರಿಗೆ ಹಿಂದೂ ಯುವಕರಿಗೆ ಮನವಿ ಹಾಗೂ ಕ್ಷಮೆಯಾಚಿಸುತ್ತೇನೆ. ಕಠಿಣ ಕ್ರಮ ತೆಗೆದುಕೊಳ್ಳಲು ನಮ್ಮ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ. ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಿದೆ ಎಂದು ವಿವರಿಸಿದರು.

ಸಿಎಂ ಬೊಮ್ಮಾಯಿ ಅವರಿಗೆ ಈ ಪ್ರಕರಣದಿಂದ ಆಘಾತವಾಗಿದೆ, ನೋವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದರೂ ನಮ್ಮ ಜನರನ್ನು ರಕ್ಷಣೆ ಮಾಡಲಾಗುತ್ತಿಲ್ಲ ಎಂಬ ನೋವು ಇದೆ. ಯುವಕರು ಹಾಗೂ ಮುಖಂಡರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಆತ್ಮಸ್ಥೈರ್ಯ ಕಳೆದುಕೊಂಡರೇ ನಾವು ಬಲಿಪಶುಗಳಾಗುತ್ತೇವೆ ಎಂದು ತಿಳಿಸಿದರು.

ಎನ್‍ಕೌಂಟರ್ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕಬೇಕು. ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ ಆಯ್ತು ಹೇಳಿ. ಅವರಿಗೆ ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ಕೊಟ್ಟರು.

ಗೃಹ ಸಚಿವರ ವೈಫಲ್ಯದ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುವುದಿಲ್ಲ. ಸಿಎಂ ರಾಜೀನಾಮೆ ಕೇಳಲು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ನೈತಿಕ ಹಕ್ಕು ಇದೆ. ನಿಮ್ಮ ಅಧಿಕಾರ ಇದ್ದಾಗ 30ಕ್ಕೂ ಹೆಚ್ಚು ಹಿಂದೂಗಳ ಹತ್ಯೆ ಆಯ್ತು, ಆಗ ನೀವು ರಾಜೀನಾಮೆ ನೀಡಿದ್ರಾ. ಸಮಾಜಘಾತುಕಗಳ ಕೇಸ್ ಸದನದಲ್ಲಿ ಇಟ್ಟು ವಾಪಸ್ಸು ಪಡೆದ್ರಿ. ಇಲ್ಲಿ ಆರೋಪ ಪ್ರತ್ಯಾರೋಪ ಮಾಡುವ ಬದಲು ಹಿಂದೂಗಳ ಜೊತೆ ನಾವು ಇದ್ದೇವೆ ಹತ್ಯೆ ಮಾಡಿದವರನ್ನು ಎನ್‍ಕೌಂಟರ್ ಮಾಡಿ ಎಂದು ಹೇಳಿ ಎಂದು ಸವಾಲ್ ಹಾಕಿದರು.

ಹರ್ಷ, ಪ್ರವೀಣ್ ಕೊಲೆಯಾಗಿ ನಾಳೆ ನಾವು ಆಗಬಹುದು ಎಂದು ಭಯಭೀತರಾಗಿದ್ದಾರೆ. ನಿಮ್ಮ ಜೊತೆ ನಮ್ಮ ಸಂಘಟನೆ, ಸರ್ಕಾರವಿದೆ. ಕಠಿಣ ಕ್ರಮ ಜರಿಗಿಸಲು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಬಿಜೆಪಿ ಸರ್ಕಾರ ಬಂದಾಗ ನಮಗೆ ರಕ್ಷಣೆ ಇದೆ ಎಂದು ಕೊಂಡಿದ್ದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ 25ಕ್ಕೂ ಹೆಚ್ಚು ಹಿಂದೂ ಯುವಕರ ಹತ್ಯೆಯಾಗಿತ್ತು. ಆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಗೂಂಡಾಗಳು, ಸಮಾಜದ ಘಾತುಕ ಶಕ್ತಿ, ಭಯೋತ್ಪಾದಕರು ನಮ್ಮ ಹಿಂದೂಗಳ ಹತ್ಯೆ ಮಾಡಿದ್ರು ಎಂದು ಆಕ್ರೋಶ ಹೊರಹಾಕಿದರು.

ಅಂದು ಅವರು ಹಾಕಿದಂತಹ ಕೇಸ್‍ಗಳನ್ನು ಅಂದಿನ ಸರ್ಕಾರ ವಾಪಸ್ಸು ಪಡೆಯಿತು. ಕೇಸ್ ಹಾಕ್ತಾರೆ ವಾಪಸ್ಸು ಪಡೆಯುತ್ತಾರೆ ಎಂದು ಅಟ್ಟಹಾಸದಿಂದ ಮೆರೆಯುತ್ತಿದ್ದಾರೆ. ಸಿಎಂ ಅವರು ಈ ಘಟನೆ ನೆನೆದು ಕಣ್ಣೀರು ಹಾಕುತ್ತಿದ್ದಾರೆ. ನಮ್ಮ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರ ರಕ್ಷಣೆಯಾಗುತ್ತಿಲ್ಲ. ನಾವು ರಾಜೀನಾಮೆ ನೀಡುತ್ತೇವೆ ಎಂದಾಗ ಸಿಎಂ ಸಂಘ ಪರಿವಾರದವರು ಕರೆದು ಮಾತನಾಡಿದರು ಎಂದರು.

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಸರ್ಕಾರ ಜೊತೆ ನಿಲ್ಲಿ ಎಂದು ಹೇಳಿದ್ದಾರೆ. ಉತ್ತರ ಪ್ರದೇಶ ಮಾದರಿಯಲ್ಲಿ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಕೇವಲ ಬಾಯಿಮಾತಿನಲ್ಲಿ ಹೇಳಿದರೆ ಸಾಲದು ಅದನ್ನು ಕಾರ್ಯರೂಪಕ್ಕೆ ತರಬೇಕು. ಆಂಧ್ರದಲ್ಲಿ ರೇಪ್ ಮಾಡಿದವರಿಗೆ ಹೇಗೆ ಎನ್ ಕೌಂಟರ್ ಮಾಡಿದ್ರೋ, ಅದೇ ರೀತಿ ಅವರನ್ನು ಎನ್ ಕೌಂಟರ್ ಮಾಡಬೇಕು ಎಂದು ಹೇಳಿದರು.

ಹರ್ಷನನ್ನ ಕೊಲೆ ಮಾಡಿದವರು ಜೈಲಿನಲ್ಲಿ ಮೋಜು ಮಸ್ತಿ ಮಾಡ್ತಾ ಇದ್ದಾರೆ. ಯಾರೋ ಅಧಿಕಾರಿ ಮಾಡಿದ್ದಕ್ಕೆ ಇಡೀ ಸರ್ಕಾರಕ್ಕೆ ಕೆಟ್ಟ ಹೆಸರು ತರುವಂತಾಗಿದೆ. ಇಂತಹ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹ ನೀಡಿದರು.

ಹಿಂದೂ ಯುವಕರು ಬಲೆ ತೊಟ್ಟಿಕೊಂಡಿಲ್ಲ, ನಿಮ್ಮ ಜೊತೆ ನಾವು ಇದೀವಿ. ಎಲ್ಲರೂ ರಾಜೀನಾಮೆ ವಾಪಸ್ಸು ಪಡೆಯಬೇಕು ಎಂದು ಮನವಿ ಮಾಡಿದರು. ಈ ರೀತಿ ಪ್ರತಿಭಟನೆಯಿಂದ ಕಾಂಗ್ರೆಸ್‍ಗೆ ಲಾಭ ಆಗುತ್ತದೆ. ಅವರಿಗೆ ಆಹಾರವಾಗಬಾರದು. ಯಾವುದೇ ಕಾರಣಕ್ಕೂ ಕಾನೂನು ಕೈ ತೆಗೆದುಕೊಳ್ಳಬಾರದು ಎಂದು ಕೇಳಿಕೊಂಡರು.

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

4 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

4 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

4 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

19 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

20 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

20 hours ago