ಹಿಂದೂ ವಿರೋಧಿ ಹೇಳಿಕೆಗಳನ್ನು ಸಹಿಸದೆ ಅವರ ಕಾರಿಗೆ ಮೊಟ್ಟೆ ಎಸೆದಿದ್ದೇನೆ : ಸಂಪತ್ – Vishwanews24

Featured, ರಾಜ್ಯ ನ್ಯೂಸ್

ನಾನು ಕಾಂಗ್ರೆಸ್ ಕಾರ್ಯಕರ್ತ..

ನಾನು ಮೊದಲು ಹಿಂದೂ, ಆಮೇಲೆ ಪಕ್ಷ..

ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ..

ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ..

ಟಿಪ್ಪು ವಿಷಯದಲ್ಲಿ ಕೊಡಗಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ.. ಇದು ನನಗೆ ಇಷ್ಟವಾಗಿಲ್ಲ

ಮಡಿಕೇರಿ: ನಾನು ಕಾಂಗ್ರೆಸ್ ಕಾರ್ಯಕರ್ತ. ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದಿದ್ದರು. ಈ ರೀತಿ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಹಾಗಾಗಿ ನಾನು ಅವರ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದು ಮೊಟ್ಟೆ ಎಸೆದ ಸಂಪತ್ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಕಾರ್ಯಕರ್ತ. ಈ ಹಿಂದೆ ಜೆಡಿಎಸ್ ಕಾರ್ಯಕರ್ತನಾಗಿದ್ದೆ. ಮಾಜಿ ಸಚಿವ ಜೀವಿಜಯ ಅವರ ಅಭಿಮಾನಿ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದೇನೆ. ಈ ಹಿಂದೆ ಸಿದ್ದರಾಮಯ್ಯ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ ಟಿಪ್ಪು ವಿಷಯದಲ್ಲಿ ಕೊಡಗಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಇದು ನನಗೆ ಇಷ್ಟವಾಗಿಲ್ಲ ಹಾಗಾಗಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದಿದ್ದಾರೆ.

ನಾನು ಸೋಮವಾರಪೇಟೆ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಆದರೆ ಪಕ್ಷ ಹೊರತುಪಡಿಸಿ ಮೊದಲು ನಾನೊಬ್ಬ ಹಿಂದೂ. ಸಿದ್ದರಾಮಯ್ಯ ಹಿಂದೂಗಳ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜೊತೆಗೆ ಅಪ್ಪಚ್ಚು ರಂಜನ್ ಅವರೊಂದಿಗೆ ಫೋಟೋ ವೈರಲ್ ವಿಚಾರವಾಗಿ ಮಾತನಾಡಿ, ಯಾವುದೋ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಫೋಟೋ ತೆಗೆದುಕೊಂಡಿದ್ದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೊಡಗಿನವರು ದನದ ಮಾಂಸ ತಿನ್ನುತ್ತಾರೆಂದು ಹೇಳಿದ್ದಾರೆ. ಟಿಪ್ಪು ಸುಲ್ತಾನ್ ವಿಷಯದಲ್ಲಿಯೂ ಕೊಡವರಿಗೆ ನೋವುಂಟು ಮಾಡಿದ್ದರು. ಇದರಿಂದ ನನಗೆ ಅವರ ಮೇಲೆ ಆಕ್ರೋಶವಿತ್ತು. ನಾನು ಮೊದಲು ಹಿಂದೂ, ಆಮೇಲೆ ಪಕ್ಷ. ಅವರ ಹಿಂದೂ ವಿರೋಧಿ ಹೇಳಿಕೆಗಳನ್ನು ಸಹಿಸದೆ ಅವರ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದು ಆತ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾನೆ.

ಜೊತೆ ಜೊತೆಯಲಿ ನಾಯಕ ನಟ ಅನಿರುದ್ಧ್ ಗೆ 2 ವರ್ಷಗಳ ಕಾಲ ನಿಷೇಧ ಹೇರಿದ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ ..

Leave a Reply