ಮಡಿಕೇರಿ: ನಾನು ಕಾಂಗ್ರೆಸ್ ಕಾರ್ಯಕರ್ತ. ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದಿದ್ದರು. ಈ ರೀತಿ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಹಾಗಾಗಿ ನಾನು ಅವರ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದು ಮೊಟ್ಟೆ ಎಸೆದ ಸಂಪತ್ ಸ್ಪಷ್ಟನೆ ನೀಡಿದ್ದಾರೆ.
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಕಾರ್ಯಕರ್ತ. ಈ ಹಿಂದೆ ಜೆಡಿಎಸ್ ಕಾರ್ಯಕರ್ತನಾಗಿದ್ದೆ. ಮಾಜಿ ಸಚಿವ ಜೀವಿಜಯ ಅವರ ಅಭಿಮಾನಿ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದೇನೆ. ಈ ಹಿಂದೆ ಸಿದ್ದರಾಮಯ್ಯ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ ಟಿಪ್ಪು ವಿಷಯದಲ್ಲಿ ಕೊಡಗಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಇದು ನನಗೆ ಇಷ್ಟವಾಗಿಲ್ಲ ಹಾಗಾಗಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದಿದ್ದಾರೆ.
ನಾನು ಸೋಮವಾರಪೇಟೆ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಆದರೆ ಪಕ್ಷ ಹೊರತುಪಡಿಸಿ ಮೊದಲು ನಾನೊಬ್ಬ ಹಿಂದೂ. ಸಿದ್ದರಾಮಯ್ಯ ಹಿಂದೂಗಳ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜೊತೆಗೆ ಅಪ್ಪಚ್ಚು ರಂಜನ್ ಅವರೊಂದಿಗೆ ಫೋಟೋ ವೈರಲ್ ವಿಚಾರವಾಗಿ ಮಾತನಾಡಿ, ಯಾವುದೋ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಫೋಟೋ ತೆಗೆದುಕೊಂಡಿದ್ದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೊಡಗಿನವರು ದನದ ಮಾಂಸ ತಿನ್ನುತ್ತಾರೆಂದು ಹೇಳಿದ್ದಾರೆ. ಟಿಪ್ಪು ಸುಲ್ತಾನ್ ವಿಷಯದಲ್ಲಿಯೂ ಕೊಡವರಿಗೆ ನೋವುಂಟು ಮಾಡಿದ್ದರು. ಇದರಿಂದ ನನಗೆ ಅವರ ಮೇಲೆ ಆಕ್ರೋಶವಿತ್ತು. ನಾನು ಮೊದಲು ಹಿಂದೂ, ಆಮೇಲೆ ಪಕ್ಷ. ಅವರ ಹಿಂದೂ ವಿರೋಧಿ ಹೇಳಿಕೆಗಳನ್ನು ಸಹಿಸದೆ ಅವರ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದು ಆತ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾನೆ.
ಜೊತೆ ಜೊತೆಯಲಿ ನಾಯಕ ನಟ ಅನಿರುದ್ಧ್ ಗೆ 2 ವರ್ಷಗಳ ಕಾಲ ನಿಷೇಧ ಹೇರಿದ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ ..
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…