Featured

ಹಿಂದೂ ಶಬ್ದದದ ಬಳಕೆ ಕುರಿತು ನನ್ನ ತೇಜೋವಧೆ ಮಾಡಲಾಗುತ್ತಿದೆ ; ನಾನು ಹೇಳಿದ್ದ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ , ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ : ಸತೀಶ್ ಜಾರಕಿಹೊಳಿ – Vishwanews24

ಹಿಂದೂ ಶಬ್ದದದ ಬಳಕೆ ಕುರಿತು ನನ್ನ ತೇಜೋವಧೆ ಮಾಡಲಾಗುತ್ತಿದೆ ; ನಾನು ಹೇಳಿದ್ದ ಆ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ , ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ : ಸತೀಶ್ ಜಾರಕಿಹೊಳಿ

ಬೆಳಗಾವಿ: ಹಿಂದೂ ಶಬ್ದ ಬಗ್ಗೆ ನೀಡಿದ್ದ ಹೇಳಿಕೆಯು ವಿವಾದವಾಗುತ್ತಿದ್ದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.

ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಹಿಂದೂ ಶಬ್ದದ ಬಗ್ಗೆ ನೀಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಪತ್ರ ಬರೆದಿರುವ ಅವರು, ನಾನು ಮಾತನಾಡಿದ್ದ ಹಿಂದೂ ಶಬ್ದದದ ಬಳಕೆ ಕುರಿತು ನನ್ನ ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ. ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರ ಬರೆದ ಜಾರಕಿಹೊಳಿ, ತಮ್ಮ ಹೇಳಿಕೆ ಬಗ್ಗೆ ತನಿಖಾ ಸಮಿತಿ ರಚಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ.

ಉಡುಪಿ: ಮರೆತು ಹೋಗಿದ್ದ 12ಲಕ್ಷ ಮೌಲ್ಯದ ಚಿನ್ನವನ್ನು ಮಹಿಳೆಗೆ ಒಪ್ಪಿಸಿದ ರಿಕ್ಷಾ ಚಾಲಕ – Vishwanews24

ಪತ್ರದಲ್ಲಿ ಏನಿದೆ?:
ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಕೆಳಕಂಡ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ. ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತಾ ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿರುತ್ತೇನೆ.

ಇದನ್ನು ನಾನು ವಿಕಿಪಿಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧಾರಿತವಾಗಿರುತ್ತದೆ. ಕೆಲವು ಪಟ್ಟಬದ್ಧ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆ.

ವಿಟ್ಲ: ಯುವಕನನ್ನು ಬೆಂಕಿ ಹಾಕಿ ಸುಟ್ಟು ಹಾಕಿದ ಪ್ರಕರಣ : ಅನೈತಿಕ ಚಟುವಟಿಕೆಗೆ ಉದ್ಯೋಗ ಅಡ್ಡಿ ಎಂದು ಕೊಲೆ – Vishwanews24

ಮತ್ತೊಮ್ಮೆ ತಮ್ಮಲ್ಲಿ ಕೇಳಿಕೊಳ್ಳುವದೇನೆಂದರೆ, ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಹಾಗೂ ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago