Featured

ಹಿಂದೂ ಶಬ್ಧ ಪರ್ಷಿಯನ್ ಭಾಷೆಯಿಂದ ಬಂದಿದ್ದಕ್ಕೆ ನೂರಾರು ದಾಖಲೆ ಇವೆ , ನಾನು ಹೇಳಿದ್ದರಲ್ಲಿ ತಪ್ಪಿಲ್ಲ : ಸತೀಶ್ ಜಾರಕಿಹೊಳಿ ಸ್ಪಷ್ಟನೆ – Vishwanews24

ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ  ಪದ – ನಾನು ಹೇಳಿದ್ದರಲ್ಲಿ ತಪ್ಪಿಲ್ಲ:

ಹಿಂದೂ’ ಶಬ್ಧ ಪರ್ಷಿಯನ್ ಭಾಷೆಯಿಂದ ಬಂದಿದ್ದಕ್ಕೆ ನೂರಾರು ದಾಖಲೆ ಇವೆ

ಹಿಂದೂ ಧರ್ಮದ ವಿಷಯ ಬಂದಾಗ ಇಷ್ಟು ವೈಭವಕರೀಸೋದು ಸರಿಯಲ್ಲ

ನನ್ನ ಹೇಳಿಕೆಯನ್ನು ಸರ್ಜಿಕಲ್ ಸ್ಟ್ರೈಕ್‌ ಮಾದರಿಯಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ

ಹಿಂದೂ’ ಪದದ ಹೇಳಿಕೆ ಕುರಿತು ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: `ಹಿಂದೂ’ ಶಬ್ಧ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ  ಪದ, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಜಾರಕಿಹೊಳಿ, 8 ನಿಮಿಷ 17 ಸೆಕೆಂಡ್‌ಗಳ ಸುದೀರ್ಘ ವೀಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಹೇಳಿದ ಒಂದು ಶಬ್ದದ ವಿಷಯ ಮೇಲೆ ಇವತ್ತು ಇಡೀ ರಾಷ್ಟ್ರ ರಾಜ್ಯದ ಎಲ್ಲಾ ಕಡೆ ಚರ್ಚೆ, ವಿಮರ್ಶೆ ಆಗುತ್ತಿದೆ. ಟೀಕೆಗಳು ಕೇಳಿಬರುತ್ತಿವೆ. ಹೀಗಾಗಿ ಸ್ಪಷ್ಟೀಕರಣ ಕೊಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ..

`ಹಿಂದೂ’ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದ್ದು ಅಂತಾ ಉಲ್ಲೇಖ ಮಾಡಿದ್ದು ನಿಜ. ಹಿಂದೂ ಶಬ್ದದ ( ಬಗ್ಗೆ ಕೆಲವು ನಿಂದನೆ ಮಾಡುವಂತ ಸಾಕಷ್ಟು ಶಬ್ದಗಳು ದಾಖಲೆಗಳಲ್ಲಿ ಸಿಗುತ್ತವೆ. ಅದರ ಬಗ್ಗೆ ನಾನು ಕೋಟ್ ಮಾಡಿದ್ದೇನೆ, ಅದು ಸತೀಶ್ ಜಾರಕಿಹೊಳಿ ಮಾತಲ್ಲ. ಈ ರೀತಿಯ ಭಾಷಣಗಳು ದೇಶದಲ್ಲಿ ಸಾವಿರಾರು ಆಗಿವೆ. ಆದರೂ ಇವತ್ತು ನಾನು ಹೇಳಿದ್ದನ್ನು ದೊಡ್ಡಮಟ್ಟದಲ್ಲಿ ವಿಶ್ಲೇಷಣೆ ಮಾಡ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.

ಹಿಂದೂ, ಪಾರ್ಸಿ, ಇಸ್ಲಾಂ  ಜೈನ ಹಾಗೂ ಬೌದ್ಧ ಧರ್ಮ ಯಾವುದೇ ಇರಲಿ, ಜಾತಿ – ಧರ್ಮವನ್ನು ಮೀರಿ ನಾವು ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ನಾನು ಹೇಳಿದರಲ್ಲಿ ಯಾವುದೂ ತಪ್ಪಿಲ್ಲ. `ಹಿಂದೂ’ ಶಬ್ಧ ಪರ್ಷಿಯನ್ ಭಾಷೆಯಿಂದ ಬಂದಿದ್ದಕ್ಕೆ ನೂರಾರು ದಾಖಲೆ ಇವೆ. ಆರ್ಯ ಸಮಾಜದ ಸ್ಥಾಪಕರು ದಯಾನಂದ ಸರಸ್ವತಿ ರಚಿಸಿದ `ಸತ್ಯಾರ್ಥ ಪ್ರಕಾಶ’, ಡಾ.ಜಿ.ಎಸ್.ಪಾಟೀಲ ಬರೆದಂತಹ `ಬಸವ ಭಾರತ’ ಪುಸ್ತಕದಲ್ಲಿ ಹಾಗೂ ಬಾಲಗಂಗಾಧರ ತಿಲಕ್‌ರವರ ಕೇಸರಿ ಪತ್ರಿಕೆಯಲ್ಲೂ ಉಲ್ಲೇಖ ಇದೆ. ಸಾಕಷ್ಟು ವೆಬ್‌ಸೈಟ್, ವಿಕಿಪೀಡಿಯದಲ್ಲಿ ಮಾಹಿತಿ ಲಭ್ಯ ಇದೆ. ಆದರೆ ನನ್ನ ಹೇಳಿಕೆಯನ್ನು ಉಕ್ರೇನ್-ರಷ್ಯಾ ಯುದ್ಶ ಮಾದರಿಯಲ್ಲಿ, ಸರ್ಜಿಕಲ್ ಸ್ಟ್ರೈಕ್‌ ಮಾದರಿಯಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಪದ ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ : ಸಿಎಂ ಬೊಮ್ಮಾಯಿ – Vishwanews24

ಹಿಂದೂ ಧರ್ಮದ ವಿಷಯ ಬಂದಾಗ ಇಷ್ಟು ವೈಭವಕರೀಸೋದು ಸರಿಯಲ್ಲ. ಹಿಂದೂಗಳ ಕೊಲೆಯಾದರೆ ಅದಕ್ಕೆ ವಿಶೇಷವಾದ ಸ್ಥಾನಮಾನ, ದಲಿತರು ಯಾರಾದರೂ ತೀರಿಕೊಂಡರೆ ಅದಕ್ಕೆ ಸ್ಥಾನಮಾನ ಇಲ್ಲ ಇದು ನಿಲ್ಲಬೇಕು. ಹಿಂದೂ ಧರ್ಮದ ಬಗ್ಗೆ ಅಟಲ್ ಬಿಹಾರಿ ವಾಜಪೇಯಿ ಭಾಷಣ ಒಮ್ಮೆ ಕೇಳಬೇಕು. ಹಿಂದೂ ಧರ್ಮ ಅಂದ್ರೆ ಅದು `ವೇ ಆಫ್ ಲೈಫ್’ ನಮ್ಮ ಬಾಳ್ವೆ ಅಂದಿದ್ದಾರೆ. ಸುಪ್ರೀಂಕೋರ್ಟ್ ಸಹ ತನ್ನ ತೀರ್ಪಿನಲ್ಲಿ ಹೇಳಿದೆ. ನಾನೇನು ಯಾರನ್ನು ಅಪಮಾನ ಮಾಡುವ ಉದ್ದೇಶ ಇಲ್ಲ. ನನ್ನ ಭಾಷಣ ಇನ್ನೂ ಹತ್ತು ಸಲ ನೋಡಿ, ತಪ್ಪಿದ್ರೆ ಚರ್ಚೆ ಮುಂದುವರಿಸಿ. ಸುಖಾ ಸುಮ್ಮನೇ ಆರೋಪ ಮಾಡುತ್ತಿದ್ದರೆ ಮಾನಹಾನಿ ಮೊಕದ್ದಮೆ, ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ `ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಹೇಳಿ ವಿವಾದಕ್ಕೀಡಾದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago