Featured

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ

ಉಡುಪಿ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಲಿರುವ ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಡುಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಪ್ರತಿವರ್ಷ ಜಿಲ್ಲೆಯಲ್ಲಿ ನಡೆಯುವ ಪಂಜಿನ ಮೆರವಣಿಗೆಯು ದೇಶಕ್ಕಾಗಿ ಬಲಿದಾನಗೈದ ವೀರ ಪುರುಷರ ಇತಿಹಾಸವನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಿಂದ ಸಮಾಜದಲ್ಲಿ ಯಾವುದೇ ಅಶಾಂತಿ ಉಂಟಾಗುವುದಿಲ್ಲ ಎಂದು ವಿಹಿಂಪ–ಬಜರಂಗದಳದ ಮುಖಂಡರು ತಿಳಿಸಿದ್ದಾರೆ.

ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ಬಜರಂಗದಳ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆರೋಪಿಸಿದ್ದಾರೆ.

ಹಿಂದೂ ಸಂಘಟನೆಗಳ ವಿರುದ್ಧ ಇಂತಹ ದಮನಕಾರಿ ಕ್ರಮಗಳನ್ನು ಮುಂದುವರಿಸಿದರೆ, ಮುಂದಿನ ದಿನಗಳಲ್ಲಿ ಎಲ್ಲಾ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago