Featured

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಡಳಿತದ ಕ್ರಮಕ್ಕೆ ಕಾಪು ಬಿಜೆಪಿ ತೀವ್ರ ಖಂಡನೆ – vishwanews24

ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ ..

ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ವಿಚಾರಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ : ಜಿತೇಂದ್ರ ಶೆಟ್ಟಿ ಉದ್ಯಾವರ

ಉಡುಪಿ: ಶಿರ್ವದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳದ ನೇತೃತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ಮಂಗಳೂರು ವಿಭಾಗದ ಬಜರಂಗದಳದ ಪ್ರಮುಖರಾದ ಪುನೀತ್ ಅತ್ತಾವರ ಅವರನ್ನು ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿರುವ ಜಿಲ್ಲಾಡಳಿತದ ಕ್ರಮವನ್ನು ಕಾಪು ಬಿಜೆಪಿಯು ತೀವ್ರವಾಗಿ ಖಂಡಿಸುತ್ತದೆ.

ಅಖಂಡ ಭಾರತ ಸಂಕಲ್ಪ ದಿನವು ದೇಶದ ಏಕತೆ, ಅಖಂಡತೆ, ರಾಷ್ಟ್ರಭಕ್ತಿ ಹಾಗೂ ರಾಷ್ಟ್ರೀಯ ಜಾಗೃತಿಯ ಸಂದೇಶವನ್ನು ಸಾರುವ ಕಾರ್ಯಕ್ರಮವಾಗಿದೆ. ಇಂತಹ ಶಾಂತಿಯುತ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು ಸಂಘಟನೆಯ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮವಾಗಿದೆ.

ಜಿಲ್ಲಾಡಳಿತವು ಕಾನೂನು ಮತ್ತು ಸುವ್ಯವಸ್ಥೆಯ ಹೆಸರಿನಲ್ಲಿ ಶಾಂತಿಯುತವಾಗಿ ನಡೆಯುವ ಕಾರ್ಯಕ್ರಮಗಳಿಗೆ ಇಂತಹ ನಿರ್ಬಂಧಗಳನ್ನು ಹೇರುವ ಮೂಲಕ ಸಂಘಟನೆಯ ಕಾರ್ಯಕರ್ತರ ಹಕ್ಕುಗಳನ್ನು ಕುಂಠಿತಗೊಳಿಸುವ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ.

ಆದ್ದರಿಂದ, ಸಂಬಂಧಪಟ್ಟ ವ್ಯಕ್ತಿಯ ಮೇಲಿನ ನಿರ್ಬಂಧವನ್ನು ಕೂಡಲೇ ಮರುಪರಿಶೀಲಿಸಿ ಹಿಂಪಡೆಯಬೇಕು ಹಾಗೂ ಅಖಂಡ ಭಾರತ ಸಂಕಲ್ಪ ದಿನದಂತಹ ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಸಂದೇಶ ಸಾರುವ ಕಾರ್ಯಕ್ರಮಗಳು ಯಾವುದೇ ಅನಗತ್ಯ ಅಡೆತಡೆಗಳಿಲ್ಲದೆ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸುತ್ತೇವೆ.

ನಿರ್ಬಂಧಗಳ ಮೂಲಕ ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ವಿಚಾರಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅರ್ಥಮಾಡಿಕೊಳ್ಳಬೇಕು ಎಂದು ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಉದ್ಯಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

16 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago