Featured

ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ನ್ಯಾಯಾಲಯ – vishwanews24

ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ನ್ಯಾಯಾಲಯ

ಢಾಕಾ,: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ ಢಾಕಾ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿಯವರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಜಾಮೀನು ಕೋರಿ ಚಟ್ಟೋಗ್ರಾಮ್ ನ್ಯಾಯಾಲಯಕ್ಕೆ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅರ್ಜಿ ಸಲ್ಲಿಸಿದ್ದರು. ಢಾಕಾದಿಂದ ಆಗಮಿಸಿದ್ದ ಸುಪ್ರೀಂಕೋರ್ಟ್‌ನ 11 ವಕೀಲರ ತಂಡವು ವಾದ ಮಂಡಿಸಿದ್ದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶ ಎಂ.ಡಿ ಸೈಫುಲ್ ಇಸ್ಲಾಂ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ನಾವು ನ್ಯಾಯಾಲಯದ ಮುಂದೆ ನಮ್ಮ ವಾದವನ್ನು ಮಂಡಿಸಿದ್ದೇವೆ. ಆದರೆ ಪ್ರಾಸಿಕ್ಯೂಷನ್ ಜಾಮೀನನ್ನು ವಿರೋಧಿಸಿತು. ಈ ಹಿನ್ನಲೆ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ನಾವು ಉನ್ನತ ನ್ಯಾಯಾಲಯಕ್ಕೆ ತೆರಳಿ ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಬಾಂಗ್ಲಾದೇಶದ ಮಾಜಿ ಡೆಪ್ಯುಟಿ ಅಟಾರ್ನಿ ಜನರಲ್ ಅಪುರ್ಬಾ ಕುಮಾರ್ ಭಟ್ಟಾಚಾರ್ಯ ಹೇಳಿದ್ದಾರೆ.

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತದ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯಾಪಕ ದಾಳಿ ನಡೆಯುತ್ತಿದೆ. ಇದನ್ನು ವಿರೋಧಿಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂಗಳ ಪರ ಧ್ವನಿ ಎತ್ತಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago