ಢಾಕಾ,: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ ಢಾಕಾ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿಯವರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಜಾಮೀನು ಕೋರಿ ಚಟ್ಟೋಗ್ರಾಮ್ ನ್ಯಾಯಾಲಯಕ್ಕೆ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅರ್ಜಿ ಸಲ್ಲಿಸಿದ್ದರು. ಢಾಕಾದಿಂದ ಆಗಮಿಸಿದ್ದ ಸುಪ್ರೀಂಕೋರ್ಟ್‌ನ 11 ವಕೀಲರ ತಂಡವು ವಾದ ಮಂಡಿಸಿದ್ದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶ ಎಂ.ಡಿ ಸೈಫುಲ್ ಇಸ್ಲಾಂ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ನಾವು ನ್ಯಾಯಾಲಯದ ಮುಂದೆ ನಮ್ಮ ವಾದವನ್ನು ಮಂಡಿಸಿದ್ದೇವೆ. ಆದರೆ ಪ್ರಾಸಿಕ್ಯೂಷನ್ ಜಾಮೀನನ್ನು ವಿರೋಧಿಸಿತು. ಈ ಹಿನ್ನಲೆ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ನಾವು ಉನ್ನತ ನ್ಯಾಯಾಲಯಕ್ಕೆ ತೆರಳಿ ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಬಾಂಗ್ಲಾದೇಶದ ಮಾಜಿ ಡೆಪ್ಯುಟಿ ಅಟಾರ್ನಿ ಜನರಲ್ ಅಪುರ್ಬಾ ಕುಮಾರ್ ಭಟ್ಟಾಚಾರ್ಯ ಹೇಳಿದ್ದಾರೆ.
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತದ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯಾಪಕ ದಾಳಿ ನಡೆಯುತ್ತಿದೆ. ಇದನ್ನು ವಿರೋಧಿಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂಗಳ ಪರ ಧ್ವನಿ ಎತ್ತಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…