ಉಡುಪಿ: ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ವಕ್ತಾರ ಶ್ರೀಕಾಂತ್ ಶೆಟ್ಟಿ ಮಾತನಾಡಿ, ಭಾರತದಲ್ಲಿ ಅಲ್ಪಸಂಖ್ಯಾತರು ಬಹುಸಂಖ್ಯಾತರ ಧಾರ್ಮಿಕ ಕೇಂದ್ರಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ. ಹಿಂದೂ ಹಬ್ಬಗಳನ್ನು ಆಚರಿಸಲು ಸವಾಲು ಎದುರಿಸುವಂತಾಗಿದೆ. ಇಷ್ಟೊಂದು ದಾಳಿ ಆಗುತ್ತಿದ್ದರೂ ಹಿಂದೂಗಳು ಮಾತ್ರ ದೂರು ದಾಖಲಿಸಲು ಸೀಮಿತರಾಗಿದ್ದಾರೆ, ಈ ವ್ಯವಸ್ಥೆ ಹಿಂದೂಗಳ ಕೈ ಕಟ್ಟಿಹಾಕಿದೆ. ಮಂಡ್ಯ ಘಟನೆಯಲ್ಲಿ ಕ್ರಿಮಿನಲ್‌ಗಳು ಒಂಬತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳು ಹೆದರುವ ವಾತಾವರಣ ನಿರ್ಮಾಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಸಚಿವರು ಮಂಡ್ಯ ಘಟನೆಯನ್ನು ಆಕಸ್ಮಿಕ ಎಂದು ಹೇಳಿದ್ದಾರೆ. ಆಕಸ್ಮಿಕ ಘಟನೆಗಳನ್ನು ಹೇಗೆ ಸೃಷ್ಟಿಸಬೇಕು ಎಂಬುದು ಜಿಹಾದಿಗಳಿಗೆ ಮಾತ್ರವಲ್ಲ, ಹಿಂದೂ ಸಮುದಾಯಕ್ಕೂ ತಿಳಿದಿದೆ. ಆದರೆ ಸಂವಿಧಾನಕ್ಕೆ ಬದ್ಧರಾಗಿ ನಾವು ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ. ನಮಗೆ ನ್ಯಾಯ ಸಿಗದಿದ್ದರೆ ಮುಂದೆ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹಿಂದೂ ಮುಖಂಡ ಸುನೀಲ್ ಕೆ ಆರ್ ಮಾತನಾಡಿ, ಲವ್ ಜಿಹಾದ್ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಅದು ಪ್ರಮುಖ ವಿಷಯ. ಗಣೇಶ ಚತುರ್ಥಿಯನ್ನು ಆಚರಿಸಲು ನಾವು ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು. ಆದರೆ ಮೊಹರಂ ನಂತಹ ಹಬ್ಬಗಳ ಆಚರಣೆಗೆ ಯಾವುದೇ ನಿಯಮಗಳಿಲ್ಲ. ಈ ದಾಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿರುವ ಶಂಕೆ ಇದೆ. ಆ ಕಾರಣಕ್ಕಾಗಿ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…