Featured

ಹಿಂದೂ ಸಮಾಜಕ್ಕೆ ಅನೇಕ ಆಕಸ್ಮಿಕ ಘಟನೆ ಮಾಡಲು ಗೊತ್ತಿದೆ ಜಿಹಾದಿಗಳಿಗೆ ಮಾತ್ರ ಗೊತ್ತಿರುವುದಿಲ್ಲ: ಕಾರ್ಕಳ ಶ್ರೀಕಾಂತ್ ಶೆಟ್ಟಿ – vishwanews24

ಉಡುಪಿ: ಗಣೇಶೋತ್ಸವ ಮೆರವಣಿಗೆ ಹಿಂಸಾಚಾರ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

ರಾಜ್ಯ ಗೃಹ ಸಚಿವ ಪರಮೇಶ್ವರ್ ಗೆ ವಾರ್ನ್ ಮಾಡಿದ ಹಿಂದೂ ಮುಖಂಡ ..

ಉಡುಪಿ: ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ವಕ್ತಾರ ಶ್ರೀಕಾಂತ್ ಶೆಟ್ಟಿ ಮಾತನಾಡಿ, ಭಾರತದಲ್ಲಿ ಅಲ್ಪಸಂಖ್ಯಾತರು ಬಹುಸಂಖ್ಯಾತರ ಧಾರ್ಮಿಕ ಕೇಂದ್ರಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ. ಹಿಂದೂ ಹಬ್ಬಗಳನ್ನು ಆಚರಿಸಲು ಸವಾಲು ಎದುರಿಸುವಂತಾಗಿದೆ. ಇಷ್ಟೊಂದು ದಾಳಿ ಆಗುತ್ತಿದ್ದರೂ ಹಿಂದೂಗಳು ಮಾತ್ರ ದೂರು ದಾಖಲಿಸಲು ಸೀಮಿತರಾಗಿದ್ದಾರೆ, ಈ ವ್ಯವಸ್ಥೆ ಹಿಂದೂಗಳ ಕೈ ಕಟ್ಟಿಹಾಕಿದೆ. ಮಂಡ್ಯ ಘಟನೆಯಲ್ಲಿ ಕ್ರಿಮಿನಲ್‌ಗಳು ಒಂಬತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳು ಹೆದರುವ ವಾತಾವರಣ ನಿರ್ಮಾಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವರು ಮಂಡ್ಯ ಘಟನೆಯನ್ನು ಆಕಸ್ಮಿಕ ಎಂದು ಹೇಳಿದ್ದಾರೆ. ಆಕಸ್ಮಿಕ ಘಟನೆಗಳನ್ನು ಹೇಗೆ ಸೃಷ್ಟಿಸಬೇಕು ಎಂಬುದು ಜಿಹಾದಿಗಳಿಗೆ ಮಾತ್ರವಲ್ಲ, ಹಿಂದೂ ಸಮುದಾಯಕ್ಕೂ ತಿಳಿದಿದೆ. ಆದರೆ ಸಂವಿಧಾನಕ್ಕೆ ಬದ್ಧರಾಗಿ ನಾವು ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ. ನಮಗೆ ನ್ಯಾಯ ಸಿಗದಿದ್ದರೆ ಮುಂದೆ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹಿಂದೂ ಮುಖಂಡ ಸುನೀಲ್ ಕೆ ಆರ್ ಮಾತನಾಡಿ, ಲವ್‌ ಜಿಹಾದ್ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಅದು ಪ್ರಮುಖ ವಿಷಯ. ಗಣೇಶ ಚತುರ್ಥಿಯನ್ನು ಆಚರಿಸಲು ನಾವು ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು. ಆದರೆ ಮೊಹರಂ ನಂತಹ ಹಬ್ಬಗಳ ಆಚರಣೆಗೆ ಯಾವುದೇ ನಿಯಮಗಳಿಲ್ಲ. ಈ ದಾಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿರುವ ಶಂಕೆ ಇದೆ. ಆ ಕಾರಣಕ್ಕಾಗಿ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

38 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

45 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

51 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago