ದಾವಣಗೆರೆ: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆ ವಿವಾಹವಾಗಿದ್ದಳು.
ಉಳಿದಂತೆ, ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಕೂಡ ಪಾಕಿಸ್ತಾನದವನಾಗಿದ್ದಾನೆ. ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿಯಾಗಿದ್ದಾನೆ.
ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದಾರೆ. ಅಲ್ತಾಫ್ ಪತ್ನಿ ಫಾತಿಮಾ ಪಾಕ್ ಪ್ರಜೆಯಾಗಿದ್ದಾಳೆ.
ಬಂಧಿತರ ಪೈಕಿ ರಶೀದ್ ಅಲಿ ಸಿದ್ದಿಕಿ ಶಂಕರ್ ಶರ್ಮಾ (48) ಎಂದು ಹೆಸರಿಟ್ಟುಕೊಂಡಿದ್ದರೆ, ಆಯೇಷಾ ಹನೀಫ್ @ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ @ ರಾಮ್ ಬಾಬಾ ಶರ್ಮಾ (73) ರುಬೀನಾ @ ರಾಣಿ ಶರ್ಮಾ (61) ಎಂದು ಹೆಸರುಗಳನ್ನಿಟ್ಟುಕೊಂಡಿದ್ದರು.
ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಬಂಧನವಾಗಿರುವ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಲಾಗಿದೆ. ಡಿವೈಎಸ್ಪಿ ಮೋಹನ್ಕುಮಾರ್ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕೃಷ್ಣಕುಮಾರ್, ಜಿಗಣಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್, ಅತ್ತಿಬೆಲೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ, ಸರ್ಜಾಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ಗಳಾದ ನವೀನ್, ಕುಮಾರ್ ಅವರ ತಂಡ ರಚನೆ ಮಾಡಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…