ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ – vishwanews24
ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ
ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ ಸಾಲಿನಲ್ಲಿ ಕುಳಿತಿದ್ದ ಸಿದ್ದರಾಮಯ್ಯ
ಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಫೋಟೋ ವೈರಲ್ ಆಗಿತ್ತು. ಅದರಲ್ಲಿ ಸಿದ್ದರಾಮಯ್ಯ 5ನೇ ಸಾಲಿನಲ್ಲಿ ಕುಳಿತಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಅವರು, ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದೆ. ಆ ವೇಳೆಗೆ ಮುಂದಿನ ಸಾಲಿನ ಆಸನಗಳೆಲ್ಲ ಭರ್ತಿಯಾಗಿದ್ದವು. ಹೀಗಾಗಿ, ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಬೇಕಾಯ್ತು ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:
ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು – vishwanews24
ಮೊದಲ ಸಾಲಿನಲ್ಲಿ ಸೋನಿಯಾ ಗಾಂಧಿ ರಾಹುಲ್ ಗಾಂಧಿ, ಖರ್ಗೆ ಹಾಗೂ ಇಂಡಿಯಾ ಒಕ್ಕೂಟದ ನಾಯಕರು ಕೂತಿದ್ದರು. 2ನೇ ಸಾಲಿನಲ್ಲಿ ಕಾಂಗ್ರೆಸ್ ಸಿಎಂಗಳಾದ ಡಿ.ಕೆ.ಶಿವಕುಮಾರ್, ರೇವಂತ್ ರೆಡ್ಡಿ ಸೇರಿ ವಿವಿಧ ರಾಜ್ಯಗಳ ನಾಯಕರು ಕುಳಿತಿದ್ದರು. ಸಿದ್ದರಾಮಯ್ಯ ಅವರು 5ನೇ ಸಾಲಿನಲ್ಲಿ ಕುಳಿತಿದ್ದರು.
ಈ ದೃಶ್ಯ ಸಾಕಷ್ಟು ವೈರಲ್ ಆಗಿತ್ತು. ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಕಡೆಗಣಿಸುತ್ತಿದೆಯೇ ಎಂಬ ಬಗ್ಗೆಯೂ ಚರ್ಚೆ ಆಗಿತ್ತು. ಹೀಗಾಗಿ ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.

