ಹುಬ್ಬಳ್ಳಿ : ಹಾಲು ಕುಡಿದ ಮಕ್ಕಳೇ ಬದುಕೋದು ಕಷ್ಟ. ಅಂಥದ್ದರಲ್ಲಿ ವಿಷ ಕುಡಿದ ಮಕ್ಕಳು ಬದುಕ್ತಾರಾ? ಹಿಂಬಾಗಿಲ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದಿರೋ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಸೋಮವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಹಾಲು ಕುಡಿದ ಮಕ್ಕಳೇ ಬದುಕುವುದಿಲ್ಲ, ಇನ್ನು ವಿಷ ಕುಡಿದವರು ಬದುಕುತ್ತಾರಾ? ಎಂದು ಬಿಜೆಪಿ ಸರ್ಕಾರದ ಕುರಿತು ವಾಗ್ದಾಳಿ ನಡೆಸಿದರು. ಭೈರತಿ ಬಸವರಾಜು ಮತ್ತು ಎಸ್.ಟಿ. ಸೋಮಶೇಖರ್ರನ್ನು ನಾನು ಮುಂಬೈಗೆ ಕಳುಹಿಸಿದ್ದೆ ಎಂದು ಆರೋಪಿಸುತ್ತಿದ್ದಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯ ಅವರನ್ನು ಮುಂಬೈಗೆ ಕಳುಹಿಸಿದ್ದು ಯಾರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನನ್ನ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ದೇವೇಗೌಡರ ಕುಟುಂಬದವರು ಮಾಡಿದ ಆರೋಪದ ಬಗ್ಗೆ ನಾನು ಸುಧೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಬೈರತಿ ಬಸವರಾಜು ಮತ್ತು ಸೋಮಶೇಖರ್ ರನ್ನು ನಾನು ಮುಂಬೈಗೆ ಕಳುಸಿದ್ದೇನೆ ಎಂದು ಅವರು ಹೇಳುತ್ತಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯರನ್ನು ಯಾರು ಕಳುಹಿಸಿದ್ದು, ಅವರು ಜೆಡಿಎಸ್‍ನವರು ಅಲ್ಲವೆ. ಹೆಚ್‍ಡಿಕೆ ಮತ್ತು ಹೆಚ್‍ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…