ಹಿಂಸಾಮಾರ್ಗ ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುತ್ತಿರುವ ನಕ್ಸಲರನ್ನು ಸ್ವಾಗತಿಸುತ್ತೇನೆ : ಸಿ.ಎಂ – vishwanews24
ಹಿಂಸಾಮಾರ್ಗ ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುತ್ತಿರುವ ನಕ್ಸಲರನ್ನು ಸ್ವಾಗತಿಸುತ್ತೇನೆ
ನಕ್ಸಲ್ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ..
ಇವರಲ್ಲಿ ಯಾರೂ ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ಮೋಸ ಮಾಡಿ ಜೇಬು ತುಂಬಿಕೊಂಡವರಲ್ಲ
ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ಧದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ.
ಅನ್ಯಾಯ-ಶೋಷಣೆ ವಿರುದ್ಧದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು.ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ.
ಲಂಚ ಪ್ರಕರಣ: ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ವಜಾ – vishwanews24
ಶರಣಾಗಿರುವ ನಕ್ಸಲರು ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಯಾಕೆ ಬೆಚ್ಚಿ ಬಿದ್ದಿಲ್ಲ? : ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಕೇಳಬೇಕಾಗಿದೆ. ಶಹಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ?
ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?
ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ – vishwanews24
ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ.
ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕ ರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ.
