ನವದೆಹಲಿ: ಹಿಂಸಾಚಾರ ಮತ್ತು ದ್ವೇಷವನ್ನು ಹರಡುವ ಬಿಜೆಪಿಯವರಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಟೀಕೆಗಳ ವಿರುದ್ಧ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಹಮದಾಬಾದ್‌ನಲ್ಲಿರುವ ಗುಜರಾತ್ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಪರಸ್ಪರ ಕಲ್ಲು ತೂರಾಟ ನಡೆಸಿದರು.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಗುಜರಾತ್ ಕಾಂಗ್ರೆಸ್ ಕಚೇರಿಯ ಮೇಲಿನ ಹೇಡಿತನದ ಮತ್ತು ಹಿಂಸಾತ್ಮಕ ದಾಳಿಯು ಬಿಜೆಪಿ ಮತ್ತು ಸಂಘ ಪರಿವಾರದ ಬಗ್ಗೆ ನನ್ನ ಅಭಿಪ್ರಾಯವನ್ನು ಇನ್ನಷ್ಟು ಬಲಪಡಿಸುತ್ತದೆ. ಹಿಂಸೆ ಮತ್ತು ದ್ವೇಷವನ್ನು ಹರಡುವ ಬಿಜೆಪಿ ಜನರಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ” ಎಂದಿದ್ದಾರೆ.
“ಗುಜರಾತ್ ಜನರು ಬಿಜೆಪಿಯ ಸುಳ್ಳನ್ನು ಸ್ಪಷ್ಟವಾಗಿ ತೀರಸ್ಕರಿಸುತ್ತಾರೆ ಮತ್ತು ಬಿಜೆಪಿ ಸರ್ಕಾರಕ್ಕೆ ನಿರ್ಣಾಯಕ ಪಾಠ ಕಲಿಸುತ್ತಾರೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ — ಗುಜರಾತ್ ನಲ್ಲಿ ಇಂಡಿಯಾ ಗೆಲ್ಲಲಿದೆ!”ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಪಾಲ್ಡಿ ಪ್ರದೇಶದಲ್ಲಿ ಎರಡು ಕಡೆಯ ಹಲವಾರು ಕಾರ್ಯಕರ್ತರು ಮತ್ತು ಮುಖಂಡರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…