ಸುಬ್ರಹ್ಮಣ್ಯ, : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ಇದೀಗ ಬೀದಿ ಕಾಳಗದವರೆಗೂ ಬಂದು ಮುಟ್ಟಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಎರಡು ಗುಂಪುಗಳ ನಡುವೆ ಇತ್ತೀಚೆಗೆ ವೈಮನಸ್ಸು ಏರ್ಪಟ್ಟಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕಿಯೆಂದು ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರು ಮಠದ ಪರವಾಗಿ ಮಾತನಾಡುತ್ತಾ ದೇವಸ್ಥಾನದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದು ಸ್ಥಳೀಯ ಹಿಂದೂ ನಾಯಕರನ್ನು ಮತ್ತು ದೇವಸ್ಥಾನದ ಭಕ್ತವರ್ಗವನ್ನು ಕೆರಳಿಸಿತ್ತು. ಈ ವಿಚಾರವಾಗಿ ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಹಾಗೂ ಚೈತ್ರಾ ನಡುವೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ನಿರಂತರ ವಾಗ್ವಾದ ನಡೆಯುತ್ತಿತ್ತು.
ಹೀಗಿರುವಾಗ, ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ಹಾಗೂ ಗುರುಪ್ರಸಾದ್ ಪಂಜ ಮತ್ತವರ ಬೆಂಬಲಿಗರ ನಡುವೆ ಸುಬ್ರಹ್ಮಮಣ್ಯದಲ್ಲಿ ಬುಧವಾರದಂದು ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಎರಡೂ ತಂಡಗಳು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಘಟನೆಯಲ್ಲಿ ಗುರುಪ್ರಸಾದ್ ಅವರು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ಗುರುಪ್ರಸಾದ್ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ, ಚೈತ್ರಾ ಕುಂದಾಪುರ ಹಾಗೂ ಇತರ 8 ಜನರನ್ನು ಸುಬ್ರಹ್ಮಣ್ಯ ಪೋಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡೂ ಗುಂಪುಗಳನ್ನು ನಿಯಂತ್ರಿಸಲು ಪೋಲೀಸರು ಲಘು ಲಾಠೀ ಪ್ರಹಾರವನ್ನೂ ನಡೆಸಬೇಕಾಯಿತು.
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…