Featured

ಹಿಂ.ಜಾ.ವೆ. ಮುಖಂಡ ಮತ್ತು ಸಂಘಪರಿವಾರ ನಾಯಕಿ ಚೈತ್ರಾ ಕುಂದಾಪುರ ನಡುವೆ ಬೀದಿಯಲ್ಲಿ ಮಾರಾಮಾರಿ

ಸುಬ್ರಹ್ಮಣ್ಯ,  : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ಇದೀಗ ಬೀದಿ ಕಾಳಗದವರೆಗೂ ಬಂದು ಮುಟ್ಟಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಎರಡು ಗುಂಪುಗಳ ನಡುವೆ ಇತ್ತೀಚೆಗೆ ವೈಮನಸ್ಸು ಏರ್ಪಟ್ಟಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕಿಯೆಂದು ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರು ಮಠದ ಪರವಾಗಿ ಮಾತನಾಡುತ್ತಾ ದೇವಸ್ಥಾನದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದು ಸ್ಥಳೀಯ ಹಿಂದೂ ನಾಯಕರನ್ನು ಮತ್ತು ದೇವಸ್ಥಾನದ ಭಕ್ತವರ್ಗವನ್ನು ಕೆರಳಿಸಿತ್ತು. ಈ ವಿಚಾರವಾಗಿ ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಹಾಗೂ ಚೈತ್ರಾ ನಡುವೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ನಿರಂತರ ವಾಗ್ವಾದ ನಡೆಯುತ್ತಿತ್ತು.

ಹೀಗಿರುವಾಗ, ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ಹಾಗೂ ಗುರುಪ್ರಸಾದ್ ಪಂಜ ಮತ್ತವರ ಬೆಂಬಲಿಗರ ನಡುವೆ ಸುಬ್ರಹ್ಮಮಣ್ಯದಲ್ಲಿ ಬುಧವಾರದಂದು ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಎರಡೂ ತಂಡಗಳು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಘಟನೆಯಲ್ಲಿ ಗುರುಪ್ರಸಾದ್ ಅವರು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ಗುರುಪ್ರಸಾದ್ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ, ಚೈತ್ರಾ ಕುಂದಾಪುರ ಹಾಗೂ ಇತರ 8 ಜನರನ್ನು ಸುಬ್ರಹ್ಮಣ್ಯ ಪೋಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡೂ ಗುಂಪುಗಳನ್ನು ನಿಯಂತ್ರಿಸಲು ಪೋಲೀಸರು ಲಘು ಲಾಠೀ ಪ್ರಹಾರವನ್ನೂ ನಡೆಸಬೇಕಾಯಿತು.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago