ಹಿಜಬ್ ಧರಿಸಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅನುಮತಿ ಕೋರಿ ಸಿಎಂಗೆ ವಿದ್ಯಾರ್ಥಿನಿ ಮನವಿ – Vishwanews24
ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ಇನ್ನೂ ನಿಮಗೆ ಅವಕಾಶವಿದೆ..
ನಮಗೆ ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವ ನಿರ್ಧಾರ ಮಾಡಬೇಕು..
ನಾವು ದೇಶದ ಭವಿಷ್ಯ..
ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಗೆ ಮತ್ತೆ ಮನವಿ ಮಾಡಿದ ಅಲಿಯಾ ಅಸ್ಸಾದಿ..
ಬೆಂಗಳೂರು: ಹಿಜಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಅಲಿಯಾ ಅಸ್ಸಾದಿ ಎಂಬ ವಿದ್ಯಾರ್ಥಿನಿ, ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮತ್ತೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇದೇ ತಿಂಗಳ 22ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಲಿವೆ. ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ಇನ್ನೂ ನಿಮಗೆ ಅವಕಾಶವಿದೆ. ಹಾಗಾಗಿ ನಮಗೆ ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವ ನಿರ್ಧಾರ ಮಾಡಬೇಕು. ನಾವು ದೇಶದ ಭವಿಷ್ಯ ಎಂದು ಹೇಳಿಕೊಂಡಿದ್ದಾರೆ. ಹಿಜಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಅಲಿಯಾ ಅಸ್ಸಾದಿ ಕೂಡ ಒಬ್ಬರು. ಇತರ ಅರ್ಜಿದಾರರಲ್ಲಿ ಆಯಿಷಾ ಪಾಲವ್ಕರ್, ಆಯಿಷಾ ಹಜಾರಾ ಅಲ್ಮಾಸ್ ಮತ್ತು ಮುಸ್ಕಾನ್ ಜೈನಾಬ್ ಸೇರಿದ್ದಾರೆ.
