Featured

ಹಿಜಬ್‌ ಧರಿಸುವುದು ಮೂಲಭೂತ ಹಕ್ಕು, ಅದು ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ : ಸಿದ್ದರಾಮಯ್ಯ – Vishwanews24

ಕೇಸರಿ ಶಾಲು ಹಾಕೋದು ಯಾವಾಗಿಂತ ಬಂತು? ನಿನ್ನೆ, ಮೊನ್ನೆಯಿಂದ ಬಂದಿದೆ..

ಹಿಜಬ್ ಮೊದಲಿನಿಂದಲೂ ಹಾಕುತ್ತಿದ್ದರು..

ಕರಾವಳಿಯು ಸಂಘ ಪರಿವಾರದ ಕೋಮುವಾದದ ಪ್ರಯೋಗಾಲಯವಾಗಿದೆ..

ಬೆಂಗಳೂರು: ಹಿಜಬ್‌ ಧರಿಸುವುದು ಮೂಲಭೂತ ಹಕ್ಕು. ಅದು ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ತಲೆದೋರಿರುವ ಹಿಜಬ್‌-ಕೇಸರಿ ಶಾಲು ವಿವಾದ ಕುರಿತು ಮಾತನಾಡಿದ ಸಿದ್ದರಾಮಯ್ಯ, ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಲೆವೆಲ್‌ನಲ್ಲಿ ಇಲ್ಲಾ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಗೇಟ್ ಹಾಕಿಕೊಂಡು ಬರಬೇಡಿ ಅಂತ ಪ್ರಿನ್ಸಿಪಾಲ್ ಹೇಳಿದ್ದಾರೆ. ಸರ್ಕಾರಿ ಕಾಲೇಜು ಅದು. ಅದು ಮೂಲಭೂತ ಹಕ್ಕಿನ ಉಲ್ಲಂಘನೆ. ಹಿಜಬ್ ಹಾಕುವುದು ಮೂಲಭೂತ ಹಕ್ಕು. ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಅದು ನ್ಯಾಯಾಲಯದಲ್ಲಿದೆ, ಏನಾಗುತ್ತೆ ನೋಡೋಣ ಎಂದು ತಿಳಿಸಿದರು.

ಇದನ್ನೂ ಓದಿ :

ಯಾರೋ ಬಿಜೆಪಿಯವರು ಹೇಳಿ ಮಾಡಿಸುತ್ತಿದ್ದಾರೆ. ಇದು ಮುಸ್ಲಿಂ ಹೆಣ್ಣುಮಕ್ಕಳ ವಿದ್ಯಾಭ್ಯಾಸವನ್ನು ತಡೆಯುವ ಪ್ರಯತ್ನ. ಸರ್ಕಾರಿ ಕಾಲೇಜಿನ ಪ್ರಿನ್ಸಿಪಾಲ್ ಹೆಣ್ಣುಮಕ್ಕಳನ್ನ ತಡೆದಿದ್ದು ಅಮಾನವೀಯ. ಕಣ್ಣೀರು ಹಾಕಿದರೂ ಬಿಡಲಿಲ್ಲ. ಅವನ್ಯಾವನೋ ಶಾಸಕ ರಘುಪತಿ ಬಟ್, ಅವನು ಹೇಳಿದನಂತೆ ಇವನು ತಡೆದನಂತೆ ಅವನು ಯಾರು ಹೇಳೋಕೆ ಯುನಿಫಾರ್ಮ್ ತನ್ನಿ ಅಂತ ಎಂದು ಏಕವಚನದಲ್ಲಿ ಕಿಡಿಕಾರಿದರು.

ಈ ಬೆಳವಣಿಗೆ ಸಂವಿಧಾನ ವಿರೋಧಿ ನಡೆ. ಕೇಸರಿ ಶಾಲು ಹಾಕಿಕೊಂಡು ಬಂದಿದ್ದರ ಉದ್ದೇಶ ಏನು? ಆ ಪ್ರಿನ್ಸಿಪಾಲ್‌ನ ಸಸ್ಪೆಂಡ್ ಮಾಡಬೇಕು. ಕೇಸರಿ ಶಾಲು ಮೊದಲಿನಿಂದ ಹಾಕ್ತಿದ್ರಾ? ಹಿಜಬ್ ಮೊದಲಿನಿಂದಲೂ ಹಾಕುತ್ತಿದ್ದರು. ಕೋರ್ಟ್‌ನಲ್ಲಿ ವಿಚಾರಣೆಯಿದೆ. ನಾನು ಲಾಯರ್, ಪ್ರತಿಪಕ್ಷ ನಾಯಕನಾಗಿಯೇ ಹೇಳುತ್ತಿದ್ದೇನೆ. ಕೇಸರಿ ಶಾಲು ಹಾಕೋದು ಯಾವಾಗಿಂತ ಬಂತು? ನಿನ್ನೆ, ಮೊನ್ನೆಯಿಂದ ಬಂದಿದೆ. ಹಿಜಬ್ ಹಿಂದಿನಿಂದಲೂ ಇದೆ. ಕರಾವಳಿಯು ಸಂಘ ಪರಿವಾರದ ಕೋಮುವಾದದ ಪ್ರಯೋಗಾಲಯವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ :

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago