ಬೆಂಗಳೂರು: ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್‍ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ. ಹಿಜಬ್-ಕೇಸರಿ ಸಂಘರ್ಷ ಹೈಕೋರ್ಟ್‍ನಲ್ಲಿರುವಂತೆ ಇತ್ತ ಶಾಂತಿ ಸುವ್ಯವಸ್ಥೆ ಕಾಪಾಡಲು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…