Featured

ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಣೆ -Vishwanews24

ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಣೆ -Vishwanews24

ಬೆಂಗಳೂರು: ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್‍ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ. ಹಿಜಬ್-ಕೇಸರಿ ಸಂಘರ್ಷ ಹೈಕೋರ್ಟ್‍ನಲ್ಲಿರುವಂತೆ ಇತ್ತ ಶಾಂತಿ ಸುವ್ಯವಸ್ಥೆ ಕಾಪಾಡಲು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago