Featured

ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು : ಸದ್ಗುರು ಜಗ್ಗಿ ವಾಸುದೇವ್ – Vishwanews24

ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು : ಸದ್ಗುರು ಜಗ್ಗಿ ವಾಸುದೇವ್ – Vishwanews24

ನವದೆಹಲಿ: ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಲೆಗಳಲ್ಲಿ ಡ್ರೆಸ್ ಕೋಡ್‍ನಲ್ಲಿ ಕುರಿತಂತೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನೀವು ಧರಿಸುವ ಹಿಜಬ್, ಬುರ್ಖಾ, ಸೀರೆ ಮತ್ತು ನೀವು ತಿನ್ನುವ ಖಿಚಡಿ ಅಥವಾ ಬಿರಿಯಾನಿ ಎಲ್ಲವೂ ಮಣ್ಣಿನಿಂದ ಬರುತ್ತದೆ. ಆದ್ದರಿಂದ ಮಣ್ಣಿಗೆ ಅದ್ಭುತವಾಗಿ ಒಂದುಗೂಡಿಸುವ ಶಕ್ತಿಯಿದೆ. ನಮ್ಮನ್ನು ಒಟ್ಟಿಗೆ ಸೇರಿಸುವ ಜೀವನದ ಅಂಶಗಳನ್ನು ನೋಡುವ ಬದಲು, ನಾವು ನಿರಂತರವಾಗಿ ನಮ್ಮನ್ನು ವಿಭಜಿಸುವ ಅಂಶಗಳನ್ನು ನೋಡುತ್ತಿದ್ದೇವೆ ಎಂದಿದ್ದಾರೆ.

ಮಣ್ಣು ಸಾರ್ವತ್ರಿಕ ವಸ್ತುವಾಗಿದೆ. ನೀವು ಯಾರು, ಯಾವ ಧರ್ಮ, ಜನಾಂಗ, ರಾಷ್ಟ್ರೀಯತೆಗೆ ಸೇರಿದವರು ಎಂಬುದು ಮುಖ್ಯವಲ್ಲ. ನೀವು ಮಣ್ಣಿನಿಂದ ಬಂದು, ಮರಳಿ ಮಣ್ಣಿಗೆ ಹೋಗುತ್ತೀರಾ. ಆದ್ದರಿಂದ ಇದು ಮಣ್ಣು ಒಂದು ಪ್ರಮುಖ ಒಗ್ಗೂಡಿಸುವ ಮೂಲವಾಗಿದೆ. ಹಿಂದಿನ ಪೀಳಿಗೆಯವರು ಬದುಕಿದ ಪೂರ್ವಾಗ್ರಹಗಳೊಂದಿಗೆ ಮಕ್ಕಳು ಬೆಳೆಸಬಾರದು. ನೀವು ಶಾಲೆಗಳಲ್ಲಿದ್ದಾಗ ನಿಮ್ಮನ್ನು ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಹೀಗಿರುವಾಗ ಮಕ್ಕಳಿಗೆ ನೀವು ಹಿಜಬ್ ಹೆಸರಿನಲ್ಲಿ ಭಜನೆಯ ವಿಷವನ್ನು ತಿನ್ನಿಸಬಾರದು ಎಂದು ಹೇಳಿದ್ದಾರೆ.

ಹಿಂದಿನ ಪೀಳಿಗೆಯ ಜನರಂತೆ ಮಕ್ಕಳು ಬೆಳೆಯಬೇಕು ಎಂದಿಲ್ಲ. ನಮ್ಮಲ್ಲಿ ಯಾವುದೇ ಪೂರ್ವಾಗ್ರಹಗಳು, ಸಮಸ್ಯೆಗಳು, ದ್ವೇಷ ಅಥವಾ ಪ್ರೀತಿ ಇರಲಿ ಇದನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಬಾರದು. ನೀವು ಬದುಕಿದ ಪೂರ್ವಾಗ್ರಹಗಳೊಂದಿಗೆ ಮಕ್ಕಳು ಬೆಳೆಯಬಾರದು ಎಂದಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago