Featured

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿಯನ್ನು ಬಹಿರಂಗವಾಗಿ ಪ್ರಕಟಗೊಳಿಸಿದೆ. 2022ರಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೆ ತಂದಿತ್ತು. ಈ ವಿಚಾರ ಇನ್ನೂ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇರುವ ಸಂದರ್ಭದಲ್ಲೇ ಸರ್ಕಾರ ಆದೇಶವನ್ನು ವಾಪಾಸ್ ಪಡೆದು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಕಲ್ಪಿಸಿರುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ನ್ಯಾಯಾಂಗ ನಿಂದನೆಯೂ ಹೌದು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ

ದಾವಣಗೆರೆ ಉಪ ಚುನಾವಣೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಗೆ ಕೊಟ್ಟ ಕಪಾಳಮೋಕ್ಷದ ನೋವನ್ನು ಮರೆಯುವುದಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಈಗ ಒಂದಾದ ಮೇಲ್ಲೊಂದರಂತೆ ಮುಸ್ಲಿಂ ತುಷ್ಟೀಕರಣ ನಡೆಸುತ್ತಿದೆ. ಕಳೆದ ಬಾರಿ ಕ್ಯಾಬಿನೆಟ್ ಸಭೆಯಲ್ಲಿ ಮುಸ್ಲಿಂ ಕಾಲೋನಿಗಳ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ಕೊಡಲಾಗಿತ್ತು. ಅದರ ಬೆನ್ನಲ್ಲೇ ಈಗ ಹಿಜಾಬ್ ಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: 

ತನ್ನ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವುದಕ್ಕಾಗಿ ದೇಶದ ಸಮಗ್ರತೆ ಹಾಗೂ ಸಂವಿಧಾನವನ್ನು ಒತ್ತೆ ಇಡುವುದಕ್ಕೆ ಹೇಸದ ಕಾಂಗ್ರೆಸಿರಿಗೆ ಈಗ ಮತ್ತೆ ಹಿಜಾಬ್ ಧ್ಯಾನ ಶುರುವಾಗಿದೆ. ಈ ಆದೇಶ ಎಷ್ಟು ಗೊಂದಲ ಗೂಡಾಗಿದೆಯೆಂದರೆ ಸಮವಸ್ತ್ರದ ಮೂಲ ಉದ್ದೇಶವನ್ನು ಬದಲಾಯಿಸಬಾರದು ಅಥವಾ ಹಾಳು ಮಾಡಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಹಿಜಾಬ್ ಧರಿಸಿದರೆ ಸಮವಸ್ತ್ರದ ಮೂಲ ಕಲ್ಪನೆಯೇ ವ್ಯತ್ಯಾಸವಾಗುತ್ತದೆ. ಒಟ್ಟಾರೆಯಾಗಿ ಈ ಸರ್ಕಾರಕ್ಕೊಂದು ಶೈಕ್ಷಣಿಕ ಧೋರಣೆಯೇ ಇಲ್ಲ. ಸಾಮಾಜಿಕ ಸಾಮರಸ್ಯವನ್ನು ಕದಡುವ ವಿಷ ಕಕ್ಕುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ. ಇಂಥ ಓಲೈಕೆ ರಾಜಕಾರಣದಿಂದ ದೇಶಾದ್ಯಂತ ” ಕಸ”ವಾಗಿರುವ ಕಾಂಗ್ರೆಸ್ ಸದ್ಯದಲ್ಲಿ ರಾಜ್ಯದಲ್ಲೂ ಮೂಲೆಗೆ ಸೇರುವ ದಿನಗಣನೆ ಈ ಆದೇಶದೊಂದಿಗೆ ಪ್ರಾರಂಭವಾಗಿದೆ. ಅತಿಯಾದ ಓಲೈಕೆ ಮಾಡಿದಕ್ಕಾಗಿ ಪಶ್ಚಿಮ ಬಂಗಾಲ ಹಾಗೂ ಇತರೆ ರಾಜ್ಯಗಳಲ್ಲಿ ಕತೆ ಏನಾಗಿದೆ ಎಂಬುದನ್ನು ಕಾಂಗ್ರೆಸ್ ಮರೆಯದಿರಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

9 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

9 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

10 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

11 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

14 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

14 hours ago