ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ಇಲ್ಲ : ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ – Vishwanews24

Featured, ರಾಜ್ಯ ನ್ಯೂಸ್

ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು..

ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ..

ಬೆಂಗಳೂರು : ಉಡುಪಿಜಿಲ್ಲೆಯಲ್ಲಿ ಹಿಜಾಬ್ ಧರಿಸೋ ವಿವಾದ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ಹೊರಡಿಸಿದೆ.

ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ  ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಹೈಕೋರ್ಟ್​ ತೀರ್ಪು ಬರುವವರೆಗೆ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್​ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು.

ಇದನ್ನೂ ಓದಿ :

ಕುಂದಾಪುರ : ಕಾಲೇಜು ಗೇಟ್ ಮುಚ್ಚಿ ವಿದ್ಯಾರ್ಥಿನಿಯರನ್ನು ಒಳಬರದಂತೆ ತಡೆದಿರುವುದು ತೀವ್ರ ಖಂಡನೀಯ : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ  – Vishwanews24

Leave a Reply