ಬೆಂಗಳೂರು: ಹಿಜಾಬ್ ಕುರಿತಾಗಿ ಹೈಕೋರ್ಟ್ ಆದೇಶ ವಿರೋಧಿಸಿ ಕರ್ನಾಟಕ ಬಂದ್ ಕರೆ ಕೊಟ್ಟವರು ಕಾನೂನು ಹಾಗೂ ಸಂವಿಧಾನದ ವಿರೋಧಿಗಳು ಎಂದು ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಬಂದ ಮೇಲೆ ಅದು ಕಾನೂನು. ಆ ಕಾನೂನು ಯಾರು ಪಾಲನೆ ಮಾಡಲ್ಲವೋ ಅವರು ಕಾನೂನು ವಿರೋಧಿಗಳು, ಸಮಾಜದ ವಿರೋಧಿಗಳು ಎಂದರು. ಯಾರೇ ಇರಬಹುದು ಎಷ್ಟೇ ದೊಡ್ಡವರು ಇರಬಹುದು. ಹೈಕೋರ್ಟ್ ಆದೇಶವನ್ನು ವಿರೋಧಿಸುತ್ತಾರೆ ಎಂದರೆ ಅವರು ಕಾನೂನು ವಿರೋಧಿ, ಸಂವಿಧಾನ ವಿರೋಧಿಗಳು. ಅಂತವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.
ಹಿಜಾಬ್ ವಿಚಾರವಾಗಿ ಹೈಕೋರ್ಟ್ ಆದೇಶದ ಬೆನ್ನಲ್ಲೇ ಕರ್ನಾಟಕ ಬಂದ್‌ಗೆ ಮುಸ್ಲಿಂ ಸಂಘಟನೆಗಳು ಕರೆ ಕೊಟ್ಟಿವೆ. ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಮುಸ್ಲಿಮರು ಬಂದ್ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…