ಉಡುಪಿ : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ
ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಈಗಾಗಲೇ ಸೂಚನೆ ನೀಡಲಾಗಿದೆ. ವದಂತಿ ಹರಡುವವರ ವಿರುದ್ಧ ಕ್ರಮಕ್ಕೆ ಎಚ್ಚರಿಕೆ ನೀಡಲಾಗಿದೆ. ಎಂದು ಉಡುಪಿ ಪೊಲೀಸ್ ವರಿಷ್ಟಾಧಿಕಾರಿ ಅಕ್ಷಯ್ ಮಚ್ಚಿಂದ್ರ ಮಾಹಿತಿ ನೀಡಿದ್ದಾರೆ.
ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ.
ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದಾರೆ. ನ್ಯಾಯಮೂರ್ತಿ ಸುಧಾಂಶ ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹಿಜಾಬ್ ವಿವಾದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…