ಹಿಜಾಬ್‌-ಕೇಸರಿ ವಿವಾದ : ಧರಣಿ ನಿರತರಾಗಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ, ಪರೀಕ್ಷೆಗೂ ಅವಕಾಶವಿಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಎಚ್ಚರಿಕೆ – Vishwanews24

Featured, ರಾಜ್ಯ ನ್ಯೂಸ್

ಹಿಜಾಬ್‌-ಕೇಸರಿ ವಿವಾದ : ಧರಣಿ ನಿರತರಾಗಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ, ಪರೀಕ್ಷೆಗೂ ಅವಕಾಶವಿಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಎಚ್ಚರಿಕೆ – Vishwanews24

ಬೆಂಗಳೂರು : ಧರಣಿ ನಿರತರಾಗಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ, ಪರೀಕ್ಷೆಗೂ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಹಿಜಾಬ್‌-ಕೇಸರಿ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹೈಕೋರ್ಟ್‌‌ನಿಂದ ತೀರ್ಪು ಬರುವ ನಿರೀಕ್ಷೆ ಇದೆ, ಅಲ್ಲಿಯವರೆಗೂ ರಾಜ್ಯ ಸರ್ಕಾರ ಜಾರಿಗೊಳಿಸದ ನಿಯಮವನ್ನು ಪಾಲಿಸಬೇಕು, ಅದನ್ನು ಬಿಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದರು.

ಇನ್ನು ವಿದ್ಯಾರ್ಥಿಗಳು ಧರಣಿಯನ್ನು ಈ ಕೂಡಲೇ ಕೈಬಿಟ್ಟು ತರಗತಿಗಳಿಗೆ ಹಾಜರಾಗಬೇಕು. ಒಂದು ವೇಳೆ ಪ್ರತಿಭಟನೆಯನ್ನು ಕೊನೆಗೊಳಿಸದೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ ಮತ್ತು ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಜೊತೆಗೆ ವಿದ್ಯಾರ್ಥಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕರ್ತವ್ಯನಿರತ ಪೊಲೀಸರಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್ – Vishwanews24

Leave a Reply