ಉಡುಪಿ: ಕರಾವಳಿಯಾದ್ಯಂತ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಎಂಜಿಎಂ ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದಿರೆ, ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದು ಉದ್ವಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಲೇಜಿಗೆ ರಜೆ ಘೋಷಿಸಲಾಗಿದೆ
ವಿದ್ಯಾರ್ಥಿನಿಯರು ಬುರ್ಖಾ, ಹಿಜಬ್ ಧರಿಸಿ ಬಂದಿದ್ದು, ಕೇಸರಿ ಪೇಟ, ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದಾರೆ. ಈ ವೇಳೆ ಆಡಳಿತ ಮಂಡಳಿ ಗೇಟ್ ಗೆ ಬೀಗ ಹಾಕಿದ್ದು, ಕೇಸರಿ ಪೇಟ ತೊಟ್ಟ ವಿದ್ಯಾರ್ಥಿಗಳು ಹಾಗೂ ಬುರ್ಖಾ ತೊಟ್ಟ ವಿದ್ಯಾರ್ಥಿನಿಯರು ಆವರಣದ ಹೊರಗಿಂದ ಬೀಗ ತೆಗೆಯಲು ಕಾಯುತ್ತಿದ್ದಾರೆ.
ಇನ್ನು ರೆಸ್ಟ್‌ರೂಮ್ ನಲ್ಲಿ ಬುರ್ಖಾ ತೆಗೆದಿರಲು ಕಾಲೇಜು ಸೂಚನೆ ನೀಡಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ ನೀಡಿದ್ರೆ ನಮಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಿ ಅಂತ ಒತ್ತಾಯಿಸಿದ್ದು, ಹಿಜಾಬ್ ನಮ್ಮ ಹಕ್ಕು ಎಂದು ಘೋಷಣೆ ಕೂಗುತ್ತಾ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನೆ ನಡೆಸುತ್ತಿದ್ದು, ಕಾಲೇಜು ಆವರಣ ಒಳಗಡೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ರಾಜ್ಯಾದ್ಯಂತ ಹಿಜಬ್ ಧರಿಸುವ ಹಕ್ಕಿಗಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…