Featured

ಹಿಜಾಬ್ ತೀರ್ಪು: ಬಂದ್ ಕರೆ ನೀಡಿದ ಸಂಘಟನೆಗಳ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅರ್ಜಿ – Vishwanews24

ಹಿಜಾಬ್ ತೀರ್ಪು: ಬಂದ್ ಕರೆ ನೀಡಿದ ಸಂಘಟನೆಗಳ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅರ್ಜಿ – Vishwanews24

ಬೆಂಗಳೂರು : ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಬಂದ್ ಗೆ ಕರೆ ನೀಡಿದ್ದ ಸಂಘಟನೆಗಳ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಕೋರಿ ಹೈಕೋರ್ಟ್ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಬಂದ್ ಕರೆ ನೀಡಿದ ಸಂಘಟನೆಗಳು ನ್ಯಾಯಾಂಗ ನಿಂದನೆ ಕೇಸ್ ಎದುರಿಸಬೇಕಾದ ಸಂಕಷ್ಟ ಎದುರಾಗಲಿದೆ.

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಪಾಲನೆ ಮಾಡಬೇಕು ಎಂಬುದಾಗಿ ಹೈಕೋರ್ಟ್ ಕೆಲ ದಿನಗಳ ಹಿಂದಷ್ಟೇ ತೀರ್ಪು ನೀಡಿತ್ತು. ಆದರೆ, ಈ ತೀರ್ಪು ಕುರಿತು ಅಸಮಾಧಾನ ವ್ಯಕ್ತಪಡಿಸಿ ಕೆಲವು ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು. ಅಲ್ಲದೆ, ಕೆಲವರು ತೀರ್ಪು ನೀಡಿದ್ದ ನ್ಯಾಯಾಧೀಶರ ವಿರುದ್ಧವೇ ಮಾತನಾಡಿದ್ದರು. ಈ ನಿಟ್ಟಿನಲ್ಲಿ ಬಂದ್ ಕರೆ ಕೊಟ್ಟ ಸಂಘಟನೆಗಳ ಮೇಲೆ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಬೇಕೆಂದು ಕೋರಿ ನ್ಯಾಯವಾದಿ ಎನ್.ಪಿ. ಅಮೃತೇಶ್ ಅವರು ರಿಜಿಸ್ಟ್ರಾರ್ ಜನರಲ್ ಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ.

ಬಂದ್ ಗೆ ಕರೆ ನೀಡಿದ್ದ ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಕರ್ನಾಟಕ ಭಾರತೀಯ ವಿದ್ಯಾರ್ಥಿ ಇಸ್ಲಾಮಿಕ್ ಸಂಘಟನೆ, ಸ್ಟೂಡೆಂಟ್ ಕ್ರಿಶ್ಚಿಯನ್ ಮೂವ್ ಮೆಂಟ್ ಆಫ್ ಇಂಡಿಯಾ, ಕರ್ನಾಟಕ ದಲಿತ ವಿದ್ಯಾರ್ಥಿ ಪರಿಷತ್, ಬೆಂಗಳೂರಿನ ಕಲೆಕ್ಟಿವ್, ಕರ್ನಾಟಕ ವಿದ್ಯಾರ್ಥಿನಿ ಇಸ್ಲಾಮಿಕ್ ಸಂಘಟನೆ, ಕರ್ನಾಟಕ ಸಗೀರ್ ಅಹ್ಮದ್ ರಶ್ದಿ ಇಮರತ್ ಇ- ಶರಿಯತ್ ಸಹಿತ ಏಳು ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

ನ್ಯಾಯಾಲಯದ ಘನತೆ ಕುಂದಿಸುವ ಕೆಲಸವನ್ನು ಮಾಡಲಾಗಿದೆ. ನ್ಯಾಯಾಧೀಶರ ಬಗ್ಗೆ ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡಿದ್ದಲ್ಲದೆ, ಕೆಲವರು ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟುಕೊಂಡು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

6 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

12 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

14 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

14 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago