ವಿಜಯಪುರ: ಹಿಜಾಬ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ನೀಡಿರುವ ಎರಡು ರೀತಿಯ ನಿರ್ಧಾರದಿಂದ ಪ್ರಕರಣ ವಿಸ್ತ್ರತ ಪೀಠಕ್ಕೆ ಹೋಗಿದೆ. ಸುಪ್ರೀಂ ಕೋರ್ಟ್ ವಿಸ್ತೃತ ಪೀಠ ನೀಡುವ ತೀರ್ಪಿಗೆ ಎಲ್ಲರೂ ಬದ್ಧರಾಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವೇ ಅಲ್ಲ. ಕುರಾನ್ ಧರ್ಮ ಗ್ರಂಥದಲ್ಲೂ ಉಲ್ಲೇಖವಿಲ್ಲದ ಹಿಜಾಬ್ ಹೆಸರಿನಲ್ಲಿ ಕೆಲವು ದೇಶ ದ್ರೋಹಿಗಳು ಆರು ಹೆಣ್ಣುಮಕ್ಕಳ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡಿದರು. ಮುಸ್ಲಿಂ ಮುಖಂಡರು ಆಗಲೇ ಬುದ್ದಿ ಹೇಳಿದ್ದರೆ ಪರಿಸ್ಥಿತಿ ಇಲ್ಲಿಗೆ ಬರುತ್ತಿರಲಿಲ್ಲ ಎಂದರು.
ಹೈಕೋರ್ಟ್ ತೀರ್ಪು ನೀಡಿದಾಗಲೇ ಮುಸ್ಲಿಂ ಮುಖಂಡರು ಆ ಆರು ಹೆಣ್ಣು ಮಕ್ಕಳಿಗೆ ಬೈದು ಬುದ್ದಿ ಹೇಳಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ. ಸದ್ಯ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ಅಭಿಪ್ರಾಯ ನೀಡಿದ್ದು ಅದನ್ನು ಪ್ರಶ್ನೆ ಮಾಡುವ ಹಕ್ಕು ಯಾರಿಗೂ ಇಲ್ಲ. ಸಮಾನತೆಗೆ, ಸಂವಿಧಾನಕ್ಕೆ ಆದ್ಯತೆ ಕೊಡಬೇಕು. ಐದು ಅಥವಾ ಏಳು ಜನರ ನ್ಯಾಯಾಧೀಶರ ವಿಸ್ತೃತ ಪೀಠ ನೀಡುವ ತೀರ್ಪು ಏನಾಗಲಿದೆ ಎಂಬುದು ನೋಡಬೇಕು, ವಿಸ್ತೃತ ಪೀಠ ನೀಡುವ ತೀರ್ಪಿಗೆ ಎಲ್ಲರೂ ಬದ್ಧವಾಗಿರಬೇಕು ಎಂದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…