ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ : ಬಿ.ಸಿ ನಾಗೇಶ್ – Vishwanews24
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ : ಬಿ.ಸಿ ನಾಗೇಶ್ – Vishwanews24
ಬೆಂಗಳೂರು: ಕರ್ನಾಟಕ ಹೈಕೋರ್ಟ್ ತೀರ್ಪಿನಂತೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಈಗಾಗಲೇ ಹಿಜಾಬ್‌ಗೆ ಸಂಬಂಧಿಸಿದಂತೆ ತೀರ್ಪು ನೀಡಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ ಎಂದರು.
ಇನ್ನು ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡುವುದಿಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಕೊಂಚ ಸಡಿಲಿಕೆ ನೀಡಿತ್ತು. ಇನ್ನುಮುಂದೆ ಮತ್ತೆ ಯಾವುದೇ ಕಾರಣಕ್ಕೂ ಪರೀಕ್ಷೆ ಮತ್ತು ತರಗತಿಯಲ್ಲಿ ಹಿಜಾಬ್ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ: ಸಿಎಂ ಬೊಮ್ಮಾಯಿ – Vishwanews24
