ಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ : ಬಿ.ಸಿ.ನಾಗೇಶ್ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

SSLC ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿನಿಗಳಿಗೆ ಹಿಜಾಬ್ ನಿಷೇಧ : ಬಿ.ಸಿ.ನಾಗೇಶ್ ಸ್ಪಷ್ಟನೆ 

ಬೆಂಗಳೂರು: ಎಸ್‌ಎಸ್‌ಎಲ್‌‌ಸಿ ಪರೀಕ್ಷೆಯಂತೆಯೇ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿನಿಗಳಿಗೆ ಹಿಜಾಬ್ ನಿಷೇಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಈ ಬಗ್ಗೆ ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ ಎಂದರು.

ಇನ್ನು ಎಸ್ ಎಸ್‌ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗುವುದು. ಏಪ್ರಿಲ್ 22 ರಿಂದ ಮೇ. 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್‌ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು ಎಂದಿದ್ದಾರೆ.

ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆ ವಸ್ತ್ರ ಧರಿಸಿ ಬರುವಂತಿಲ್ಲ. ಮುಖ್ಯ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೆ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಉಡುಪಿ : ಹಿಜಬ್ ಹೋರಾಟದ ವಿದ್ಯಾರ್ಥಿಗಳಿಗೆ ಆಲ್‍ಖೈದಾ ಬೆಂಬಲ ; ವಿದ್ಯಾರ್ಥಿಗಳು ಟೆರೆರಿಸ್ಟ್ ಸಂಘಟನೆಯ ಸದಸ್ಯರು ಎಂದು ಸಾಬೀತು : ಯಶ್‌ಪಾಲ್ ಸುವರ್ಣ – VIshwanews24

Leave a Reply