ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಂತೆಯೇ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿನಿಗಳಿಗೆ ಹಿಜಾಬ್ ನಿಷೇಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಈ ಬಗ್ಗೆ ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ ಎಂದರು.
ಇನ್ನು ಎಸ್ ಎಸ್‌ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗುವುದು. ಏಪ್ರಿಲ್ 22 ರಿಂದ ಮೇ. 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್‌ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು ಎಂದಿದ್ದಾರೆ.
ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆ ವಸ್ತ್ರ ಧರಿಸಿ ಬರುವಂತಿಲ್ಲ. ಮುಖ್ಯ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೆ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…