ಬೆಂಗಳೂರು: ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಇದನ್ನು ಕಾಂಗ್ರೆಸ್, ಪಿಎಫ್ಐ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಭಿನ್ನ ತೀರ್ಪಿನ ಬಗ್ಗೆ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.
ಫೆ.5 ರಂದು ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಕುರಿತು ಸುತ್ತೊಲೆ ಹೊರಡಿಸಿದೆ. ಇದರಿಂದ ಹಿಂದೆ ಸರಿಯೋ ಪ್ರಶ್ನೆ ಇಲ್ಲ. ಆದರೆ ಇದೀಗ ಸುಪ್ರೀಂ ಕೋರ್ಟ್ ವಿಭಿನ್ನವಾಗಿ ತೀರ್ಪು ಬಂದಿದೆ. ಆದರೆ ಹೈಕೋರ್ಟ್ ತೀರ್ಪಿನಿಂದ ಹಿಂದೆ ಸರಿಯೋ ಪ್ರಶ್ನೆ ಇಲ್ಲ ಎಂದರು.
ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಕಾಂಗ್ರೆಸ್, ಪಿಎಫ್ಐ ಅರ್ಥ ಮಾಡಿಕೊಳ್ಳಬೇಕು, ಸಮಾಜಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ. ಕೋರ್ಟ್ ಹಿಜಾಬ್ ಧರಿಸಿ ಬರಬಾರದು ಅಂದಾಗ ಸುಪ್ರೀಂ ಕೋರ್ಟ್ ಹೋಗ್ತಾರೆ ಅಂದ್ರೆ. ಇದರಿಂದ ಅರ್ಥ ಆಗುತ್ತೆ ಮತೀಯ ಶಕ್ತಿ ಎಷ್ಟಿದೆ ಅಂತ ಎಂದು ಹೇಳಿದರು.
ಹಿಜಾಬ್ಗೆ ಸಂಬಂಧಿಸಿದ ಸುಪ್ರೀಂಕೋರ್ಟ್ ತೀರ್ಪು ಸ್ವಾಗತ : ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್
ಮುಸ್ಲಿಂ ರಾಷ್ಟ್ರ ಇರಾನ್, ಇರಾಕ್‌ನಲ್ಲಿ ಹಿಜಾಬ್ ಬೇಡ ಅಂತ ಇದ್ದಾರೆ. ಶಾಲೆಯಲ್ಲಿ ಹಿಜಾಬ್ ಬೇಕು ಅಂತ ಇಲ್ಲಿ ಪ್ರತಿಭಟನೆ ಮಾಡ್ತಾರೆ.
ಪಿಎಫ್ಐ ಇನ್ನಾದ್ರೂ ಬದಲಾಗಬೇಕು. ಈಗಾಗಲೇ ಪಿಎಫ್ಐ ನಿಷೇಧ ಮಾಡಲಾಗಿದೆ. ಕಾಂಗ್ರೆಸ್ ಇದನ್ನು ಪುಷ್ಠೀಕರಿಸುವ ಕೆಲಸ ಮಾಡಿತು. ಸಿದ್ದರಾಮಯ್ಯ ಸ್ವಾಮೀಜಿ ಕೂಡ ಕಾವಿ ಹಾಕ್ತಾರೆ ಅಂತ ಹೇಳಿದ್ರು. ಕಾಂಗ್ರೆಸ್ ಕೂಡ ಹಿಜಾಬ್ ಚೋಡೋ ಅಂತ ಭಾರತ್ ಜೋಡೋದಲ್ಲಿ ಜೋಡಿಸಿಕೊಳ್ಳಲಿ ಎಂದು ಸವಾಲು ಹಾಕಿದರು.
ಹಿಜಾಬ್ ನಿರ್ಬಂಧದಿಂದ ಒಳ್ಳೆಯ ವಾತಾವರಣ ಸೃಷ್ಟಿಯಾಗಲಿದೆ. ಎಲ್ಲಾ ವಿದ್ಯಾರ್ಥಿಗಳು ಒಂದೇ ರೀತಿ ಕಾಣಬೇಕು ಅಂತ ಶಾಲಾ ಸಮವಸ್ತ್ರ ತರಲಾಗಿದೆ. ಯಾವುದೇ ಕಾರಣಕ್ಕೂ ಫೆಬ್ರವರಿ 5ರಂದು ಹೊರಡಿಸಿದ ಆದೇಶ ವಾಪಸ್ ಪಡೆಯೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…