Featured

ಹಿಜಾಬ್ ಪ್ರಕರಣ : ಪರೀಕ್ಷೆ ಹಾಗೂ ಹಿಜಾಬ್‍ಗೂ ಯಾವುದೇ ಸಂಬಂಧವಿಲ್ಲ ; ತುರ್ತು ವಿಚಾರಣೆ ಸಾಧ್ಯವಿಲ್ಲ : ಸುಪ್ರೀಂಕೋರ್ಟ್ – Vishwanews24

ಹಿಜಾಬ್ ಪ್ರಕರಣ : ಪರೀಕ್ಷೆ ಹಾಗೂ ಹಿಜಾಬ್‍ಗೂ ಯಾವುದೇ ಸಂಬಂಧವಿಲ್ಲ ; ತುರ್ತು ವಿಚಾರಣೆ ಸಾಧ್ಯವಿಲ್ಲ : ಸುಪ್ರೀಂಕೋರ್ಟ್ – Vishwanews24

ನವದೆಹಲಿ:  ಹಿಜಾಬ್ ವಿಷಯವನ್ನು ರಂಜಿಸಬೇಡಿ, ಸಂವೇದನಾಶೀಲರಾಗಬೇಡಿ. ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಹಿಜಾಬ್‍ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಕೀಲ ದೇವದತ್ ಕಾಮತ್ ಅವರು ಮತ್ತೊಮ್ಮೆ ತುರ್ತು ವಿಚಾರಣೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠ ಈ ವಿಷಯವನ್ನು ರಂಜಿಸಬೇಡಿ.

ಪರೀಕ್ಷೆ ಹಾಗೂ ಹಿಜಾಬ್‍ಗೂ ಯಾವುದೇ ಸಂಬಂಧವಿಲ್ಲ. ಪ್ರಸ್ತುತ ಮುಂದಿನ ವಿಚಾರಣೆ ದಿನಾಂಕವನ್ನು ತಿಳಿಸುತ್ತೇವೆ. ಆತುರ ಬೇಡ ಎಂದು ಸೂಚಿಸಿದೆ. ಮುಂದಿನ ಮಾ.28ರಿಂದ ಪರೀಕ್ಷೆಗಳು ಆರಂಭಗೊಳ್ಳಲಿವೆ.

ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಿ ಮಧ್ಯಂತರ ತೀರ್ಪು ನೀಡಬೇಕು ಇಲ್ಲದಿದ್ದರೆ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುತ್ತಾರೆ ಎಂದು ಅರ್ಜಿದಾರರ ಪರ ವಕೀಲ ದೇವದಾಸ್ ಕಾಮತ್ ಅವರು ಮನವಿ ಮಾಡಿದ್ದರು.

ನ್ಯಾಯಾಲಯವು ಯಾವುದೇ ನಿರ್ದಿಷ್ಟ ಸಮಯವನ್ನು ನೀಡಲು ಸದ್ಯ ಸಾಧ್ಯವಿಲ್ಲ. ತುರ್ತು ವಿಚಾರಣೆಯೂ ಅಗತ್ಯವಿಲ್ಲ. ಮಕ್ಕಳ ಪರೀಕ್ಷೆ ವಿಷಯವನ್ನು ಇದರಲ್ಲಿ ಸೇರಿಸಬೇಡಿ. ಸೂಕ್ತ ಸಮಯದಲ್ಲಿ ವಿಷಯದ ವಿಚಾರಣೆ ನಡೆಯಲಿದೆ. ಸಂಯಮ ಇರಲಿ, ಒತ್ತಡ ತರಬೇಡಿ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಈ ಹಿಂದೆ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಹೋಳಿ ಹಬ್ಬದ ನಂತರ ಇದರ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿತ್ತು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago