ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ಶೀಘ್ರದಲ್ಲಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಮಂಗಳವಾರ ಸಿಜೆಐ ಪೀಠದ ಮುಂದೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ದಯವಿಟ್ಟು ಎರಡು ದಿನ ಕಾಯಿರಿ. ನಾನು ಪಟ್ಟಿ ಮಾಡುತ್ತೇನೆ ಎಂದು ಮೀನಾಕ್ಷಿ ಅರೋರಾ ಅವರಿಗೆ ತಿಳಿಸಿದ್ದಾರೆ. ಅವರು ವಿದ್ಯಾರ್ಥಿಗಳ ಪರವಾಗಿ ಪ್ರಕರಣದ ಆರಂಭಿಕ ವಿಚಾರಣೆಗೆ ಮೌಖಿಕವಾಗಿ ಪ್ರಸ್ತಾಪಿಸಿದರು.
ಹಿಜಬ್ ಇಸ್ಲಾಂ ಧಾರ್ಮಿಕ ಆಚರಣೆಯ ಅಗತ್ಯ ಭಾಗವಲ್ಲ. ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…