Featured

ಹಿಜಾಬ್ ಪ್ರಕರಣ : ವಿಚಾರಣೆ ಗೆ ಇನ್ನೆರಡು ದಿನ ಕಾಯಿರಿ : ಸುಪ್ರೀಂ ಕೋರ್ಟ್ – Vishwanews24

ಹಿಜಾಬ್ ಪ್ರಕರಣ : ವಿಚಾರಣೆ ಗೆ ಇನ್ನೆರಡು ದಿನ ಕಾಯಿರಿ : ಸುಪ್ರೀಂ ಕೋರ್ಟ್

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ಶೀಘ್ರದಲ್ಲಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಮಂಗಳವಾರ ಸಿಜೆಐ ಪೀಠದ ಮುಂದೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ದಯವಿಟ್ಟು ಎರಡು ದಿನ ಕಾಯಿರಿ. ನಾನು ಪಟ್ಟಿ ಮಾಡುತ್ತೇನೆ ಎಂದು ಮೀನಾಕ್ಷಿ ಅರೋರಾ ಅವರಿಗೆ ತಿಳಿಸಿದ್ದಾರೆ. ಅವರು ವಿದ್ಯಾರ್ಥಿಗಳ ಪರವಾಗಿ ಪ್ರಕರಣದ ಆರಂಭಿಕ ವಿಚಾರಣೆಗೆ ಮೌಖಿಕವಾಗಿ ಪ್ರಸ್ತಾಪಿಸಿದರು.

ಹಿಜಬ್‌ ಇಸ್ಲಾಂ ಧಾರ್ಮಿಕ ಆಚರಣೆಯ ಅಗತ್ಯ ಭಾಗವಲ್ಲ. ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

6 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

7 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

7 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

7 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago