ಮಂಗಳೂರು : ಉಡುಪಿ ಮಹಿಳಾ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜಿನ ಹಿಜಾಬ್ ವಿಚಾರಕ್ಕೆ ಯಾರೂ ಕೂಡ ಮೂಗು ತುರಿಸಬಾರದು ಎಂದಿದ್ದಾರೆ.
ಕಾಲೇಜು ಆಡಳಿತ ಮಂಡಳಿ, ಹೆತ್ತವರು, ಸ್ಥಳೀಯರೇ ಇದನ್ನು ಬಗೆ ಹರಿಸಿಕೊಳ್ಳಬೇಕು. ಬಗೆ ಹರಿಯದಿದ್ದರೆ ಕೋರ್ಟ್ಗೆ ಹೋಗಲಿ, ಕೋರ್ಟ್ ತೀರ್ಮಾನಿಸುತ್ತದೆ. ಹಿಜಾಬ್ಗೆ ವಿರುದ್ಧವಾಗಿ ಶಾಲು ಹಾಕಿಕೊಂಡು ಹೋಗುವುದು ಸರಿಯಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೂ ಕೂಡಾ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಬಾರದು. ಒಂದು ಕಡೆ ಧಾರ್ಮಿಕ ಸ್ವಾತಂತ್ರ್ಯ, ಇನ್ನೊಂದು ಕಡೆ ಸಮವಸ್ತ್ರದ ಚರ್ಚೆ ನಡೆಯುತ್ತಿದೆ. ನನ್ನ ಮಗಳಿಗೂ ಕೂಡಾ ಹಿಜಾಬ್ ಹಾಕದೆ ಇರಲು ಸಾಧ್ಯವಿರಲಿಲ್ಲ. ಹಾಗಾಗಿ ನಾನು ಹಿಜಾಬ್ ಧರಿಸಲು ಅವಕಾಶವಿದ್ದ ಕಾಲೇಜಿಗೆ ಆಕೆಯನ್ನು ಸೇರಿಸಿದೆ. ಹಿಜಾಬ್ ಧರಿಸಲು ಅವಕಾಶವಿದ್ದ ಕಾಲೇಜಿಗೆ ಮಗಳನ್ನು ಸೇರಿಸಿದ್ದೇನೆ.
ಅವಕಾಶ ಇಲ್ಲದ ಕಡೆ ಸೇರಿಸಿ ನಾನು ಹೋರಾಟಕ್ಕೆ ನಿಂತರೆ ಆಗುವುದೇ? ಹೆಣ್ಣು ಮಕ್ಕಳ ಶಿಕ್ಷಣವು ಬಹಳಷ್ಟು ಮುಖ್ಯವಾಗಿದೆ. ಆದರೆ ಈ ವಿಚಾರದಲ್ಲಿ ಮಕ್ಕಳ ಶಿಕ್ಷಣದ ಚಿಂತೆ ಯಾರಿಗೂ ಇಲ್ಲ. ಇಲ್ಲಿ ಕೇವಲ ರಾಜಕೀಯ ಮತ್ತು ಸ್ವಪ್ರತಿಷ್ಠೆಯಾಗಿಬಿಟ್ಟಿದೆ. ಮಕ್ಕಳ ಶಿಕ್ಷಣ ಮುಖ್ಯವಾದರೆ ಈ ವಿಚಾರ ಬಗೆಹರಿಯುತ್ತದೆ ಎಂದು ಮಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…