Featured

ಹಿಜಾಬ್ ಬಗ್ಗೆ ಸುಪ್ರೀಂಕೋರ್ಟ್  ತೀರ್ಪು ಬರುವವರೆಗೂ ಮುಸ್ಲಿಂ ಸಂಘಟನೆಗಳು ಬಂದ್ ಮುಂದುವರೆಸಲಿ : ಯಶ್ ಪಾಲ್ ಸುವರ್ಣ ಆಕ್ರೋಶ – Vishwanews24

ಹಿಜಾಬ್ ಬಗ್ಗೆ ಸುಪ್ರೀಂಕೋರ್ಟ್  ತೀರ್ಪು ಬರುವವರೆಗೂ ಮುಸ್ಲಿಂ ಸಂಘಟನೆಗಳು ಬಂದ್ ಮುಂದುವರೆಸಲಿ : ಯಶ್ ಪಾಲ್ ಸುವರ್ಣ ಆಕ್ರೋಶ – Vishwanews24

ಹಿಜಾಬ್ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿರುವ ಬಂದ್ ಬೆಂಬಲಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ನ್ಯಾಯಾಂಗ ನಿಂದನೆ ಮಾಡಿರುವ ಅಂಗಡಿ ಮಾಲೀಕರು ಸುಪ್ರೀಂಕೋರ್ಟ್ ತೀರ್ಪಿನವರೆಗೂ ಬಂದ್ ಮುಂದುವರೆಸಲಿ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂವಿಧಾನಾತ್ಮಕ ತಳಹದಿಯಲ್ಲಿ ರಾಜ್ಯದ ಹೈಕೋರ್ಟ್ ತ್ರಿಸದಸ್ಯ ಪೀಠದ ಹಿಜಾಬ್ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ವಿರೋಧಿಸಿ ದೇಶದ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡುವ ಮೂಲಕ ಭಾರತದ ಕಾನೂನಿಗೆ ತಲೆಬಾಗುವುದಿಲ್ಲ ಎಂದು ಉದ್ಧಟತನ ಮೆರೆಯುವ ಮೂಲಕ ರಾಷ್ಟ್ರ ವಿರೋಧಿಗಳ ಮುಖವಾಡ ಸಮಾಜದ ಮುಂದೆ ಕಳಚಿಬಿದ್ದಿದೆ.
ಹಿಜಾಬ್ ವಿವಾದದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆ ಮತ್ತು ಶಾಂತಿ ಸುವ್ಯವಸ್ಥೆ ಹದಗೆಡಿಸುವ ನಿಟ್ಟಿನಲ್ಲಿ ಮತಾಂಧ ಶಕ್ತಿಗಳ ಪ್ರಯತ್ನಕ್ಕೆ ಹೈಕೋರ್ಟ್ ತೀರ್ಪು ತಡೆಯೊಡ್ಡಿದ್ದು, ಇದರಿಂದ ಭ್ರಮನಿರಸನಗೊಂಡು ಮತೀಯವಾದಿಗಳು ಬಂದ್ ಕರೆ ನೀಡಿದ್ದಾರೆ.
ಈ ಮತಾಂಧ ರಾಷ್ಟ್ರ ವಿರೋಧಿಗಳ ಬಗ್ಗೆ ಬಹುಸಂಖ್ಯಾತ ಹಿಂದೂ ಸಮಾಜ ಜಾಗೃತೆ ವಹಿಸಿ, ಈ ಮನಸ್ಥಿತಿಯವರೊಂದಿಗೆ ಆರ್ಥಿಕ ವ್ಯವಹಾರಗಳನ್ನು ನಿರ್ಬಂಧಿಸಿ ತಕ್ಕ ಉತ್ತರ ನೀಡುವ ಸಮಯ ಬಂದಿದೆ.
ಈ ನೆಲದ ಕಾನೂನಿಗೆ ಆಗೌರವ ತೋರುವ ಮೂಲಕ ಬಹುಸಂಖ್ಯಾತ ಹಿಂದುಗಳ ಭಾವನೆಗಳಿಗೆ ಘಾಸಿ ಮಾಡುವವರಿಗೆ ಹಿಂದೂ ದೇಗುಲ ಮಂದಿರಗಳ ಧಾರ್ಮಿಕ ಸಮಾರಂಭಗಳಲ್ಲೂ ವ್ಯಾಪಾರ ವ್ಯವಹಾರ ಬಹಿಷ್ಕರಿಸಲು ಸಮಸ್ತ ಹಿಂದೂ ಸಮಾಜ  ಮುಂದಾಗುವ ಕಾಲ ನಿರ್ಮಾಣವಾಗಿದ್ದು ಈ ಮೂಲಕ ಮತಾಂಧರಿಗೆ ದಿಟ್ಟ ಉತ್ತರ ನೀಡಲು ಸಾಧ್ಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

16 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

16 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago