ಬೆಂಗಳೂರು: ಹಿಜಾಬ್ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿಗಳ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವವರೆಗೆ ಶಾಲೆಯ ಬಳಿ ವಿದ್ಯಾರ್ಥಿನಿಯರು ಮತ್ತು ಬೋಧಕರು ಹಿಜಾಬ್ ಮತ್ತು ಬುರ್ಕಾ ತೆಗೆಯುವುದನ್ನು ವಿಡಿಯೊ ಮಾಡುವುದು, ಫೋಟೊ ತೆಗೆಯದಂತೆ 70 ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಸಲಾಗಿದೆ.
ಅಬ್ದುಲ್ ಮನ್ಸೂರ್, ಮೊಹಮ್ಮದ್ ಖಲೀಲ್ ಹಾಗೂ ಆಸೀಫ್ ಅಹ್ಮದ್ ಅವರು ವಕೀಲ ಎಸ್ ಬಾಲಕೃಷ್ಣನ್ ಅವರ ಮೂಲಕ ಸಲ್ಲಿಸಿರುವ ಮನವಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ಅರ್ಜಿಯನ್ನಿ ಹಿಜಾಬ್‌ಗೆ ಸಂಬಂಧಿಸಿದಂತೆ ಪ್ರಕರಣಗಳ ಜೊತೆ ಸೇರಿಸಲು ಪೀಠವು ಆದೇಶ ಮಾಡಿದೆ.
ಇದನ್ನೂ ಓದಿ :
ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ಬೋಧಕರ ವಿಡಿಯೊ ಮತ್ತು ಫೋಟೊ ಸೆರೆ ಹಿಡಿಯುವುದು ಮತ್ತು ನಿರಂತರವಾಗಿ ಅದನ್ನು ಪ್ರಸಾರ ಮಾಡುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿರುವ ಈ ಮನವಿಯಲ್ಲಿ ರಾಜ್ಯ ಸರ್ಕಾರದ ಗೃಹ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳನ್ನು ಮೊದಲ ಮತ್ತು ಎರಡನೇ ಪ್ರತಿವಾದಿಗಳನ್ನಾಗಿಸಲಾಗಿದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…