Featured

ಹಿಜಾಬ್‌, ಬುರ್ಕಾ ತೆಗೆಯುವ ದೃಶ್ಯ ಸೆರೆ ಹಿಡಿಯದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ  ಹೈಕೋರ್ಟ್ ಗೆ ಮನವಿ – Vishwanews24

ಹಿಜಾಬ್‌, ಬುರ್ಕಾ ತೆಗೆಯುವ ದೃಶ್ಯ ಸೆರೆ ಹಿಡಿಯದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ  ಹೈಕೋರ್ಟ್ ಗೆ ಮನವಿ – Vishwanews24

ಬೆಂಗಳೂರು: ಹಿಜಾಬ್‌ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿಗಳ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವವರೆಗೆ ಶಾಲೆಯ ಬಳಿ ವಿದ್ಯಾರ್ಥಿನಿಯರು ಮತ್ತು ಬೋಧಕರು ಹಿಜಾಬ್‌ ಮತ್ತು ಬುರ್ಕಾ ತೆಗೆಯುವುದನ್ನು ವಿಡಿಯೊ ಮಾಡುವುದು, ಫೋಟೊ ತೆಗೆಯದಂತೆ 70 ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಸಲಾಗಿದೆ.

ಅಬ್ದುಲ್‌ ಮನ್ಸೂರ್‌, ಮೊಹಮ್ಮದ್‌ ಖಲೀಲ್‌ ಹಾಗೂ ಆಸೀಫ್‌ ಅಹ್ಮದ್‌ ಅವರು ವಕೀಲ ಎಸ್‌ ಬಾಲಕೃಷ್ಣನ್‌ ಅವರ ಮೂಲಕ ಸಲ್ಲಿಸಿರುವ ಮನವಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ಅರ್ಜಿಯನ್ನಿ ಹಿಜಾಬ್‌ಗೆ ಸಂಬಂಧಿಸಿದಂತೆ ಪ್ರಕರಣಗಳ ಜೊತೆ ಸೇರಿಸಲು ಪೀಠವು ಆದೇಶ ಮಾಡಿದೆ.

ಇದನ್ನೂ ಓದಿ :

ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ಬೋಧಕರ ವಿಡಿಯೊ ಮತ್ತು ಫೋಟೊ ಸೆರೆ ಹಿಡಿಯುವುದು ಮತ್ತು ನಿರಂತರವಾಗಿ ಅದನ್ನು ಪ್ರಸಾರ ಮಾಡುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿರುವ ಈ ಮನವಿಯಲ್ಲಿ ರಾಜ್ಯ ಸರ್ಕಾರದ ಗೃಹ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳನ್ನು ಮೊದಲ ಮತ್ತು ಎರಡನೇ ಪ್ರತಿವಾದಿಗಳನ್ನಾಗಿಸಲಾಗಿದೆ.

ಇದನ್ನೂ ಓದಿ :

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

21 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

21 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

21 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

21 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

21 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago