ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಗುರುವಾರ ಸಲಹೆ ನೀಡಿದ್ದಾರೆ.
ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು ಮಧ್ಯಾಹ್ನ ಆರಂಭವಾಗಿದ್ದು, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸುತ್ತಿದೆ.
ಫೆ.8, 9 ರಂದು ಎರಡು ದಿನಗಳ ಕಾಲ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಹಿಜಾಬ್ ಕುರಿತ ಅರ್ಜಿಗಳ ವಿಚಾರಣೆ ನಡೆದ ಬಳಿಕ ಪ್ರಕರಣ ಧರ್ಮ ಸೂಕ್ಷ್ಮವಾದ ಕಾರಣ ಇದನ್ನು ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಇದೀಗ ಮೂವರು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಹಿಜಾಬ್ ಕುರಿತ ಅರ್ಜಿಗಳ ವಿಚಾರಣೆ ನಡೆಯುತ್ತಿದೆ.
ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರು, ಹಿಜಾಬ್ ವಿವಾದದ ಕಾರಣಕ್ಕಾಗಿ ಶಾಲೆಗಳನ್ನು ಸ್ಥಗಿತಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ. ವಿವಾದ ಕಾರಣದಿಂದ ಮಕ್ಕಳನ್ನು ಶಿಕ್ಷಣದಿಂದ ದೂರ ಇಡುವುದು ಸರಿಯಲ್ಲ ಎಂದು ಹೇಳಿದರು.
ಇದನ್ನು ಸರ್ಕಾರದ ಪರ ವಕೀಲರು ಒಪ್ಪಿಕೊಂಡರು. ಇದೇ ವೇಳೆ ಅರ್ಜಿದಾರರ ಪರ ವಕೀಲ ಕಾಮತ್ ಸ್ಕಾರ್ಫ್ ಅವರು, ಹಿಜಾಬ್ ಧಾರ್ಮಿಕ ಆಚರಣೆಯಲ್ಲ. ಮೂಲಭೂತ ಹಕ್ಕು ಎಂದು ವಾದ ಮಂಡನೆ ಮಾಡಿದರು. ಅಲ್ಲದೆ, ಈ ಸಂಬಂಧ ಮಧ್ಯಂತರ ಆದೇಶಕ್ಕೂ ಒತ್ತಾಯಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…