ಹಿಜಾಬ್​ ವಿವಾದ ​:  ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್​ ಗ್ರೀನ್​ ಸಿಗ್ನಲ್​ – Vishwanews24

Featured, ರಾಷ್ಟ್ರ ನ್ಯೂಸ್

ಹಿಜಾಬ್​ ವಿವಾದ ​:  ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ಗ್ರೀನ್​ ಸಿಗ್ನಲ್​

ನವದೆಹಲಿ: ರಾಜ್ಯದಲ್ಲಿ ಭಾರೀ ವಿವಾದದ ಕಿಡಿ ಹೊತ್ತಿಸಿದ್ದ ಹಿಜಾಬ್​ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಹಿಜಾಬ್​ ಬ್ಯಾನ್​ ಮಾಡಿದ್ದ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ಬುಧವಾರ ಸಮ್ಮತಿ ನೀಡಿದ್ದು, ಮುಂದಿನ ವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಹಿಜಾಬ್​ ಬ್ಯಾನ್​ ಮಾಡಿರುವ ಕರ್ನಾಟಕ ಹೈಕೋರ್ಟ್​ ತೀರ್ಪನ್ನು ವಿರೋಧಿಸಿ ಕಳೆದ ಮಾರ್ಚ್​ನಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೂ ಈ ವಿಚಾರವನ್ನು ಪಟ್ಟಿ ಮಾಡಿಲ್ಲ ಎಂದು ವಕೀಲ ಪ್ರಶಾಂತ್​ ಭೂಷಣ್​ ಅವರು ನ್ಯಾಯಾಲಯದ ಮುಂದೆ ಪ್ರಸ್ತುತ ಪಡಿಸಿದರು. ಬಳಿಕ ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ ನೇತೃತ್ವದ ಸಾಂವಿಧಾನಿಕ ಪೀಠವು ಮುಂದಿನ ವಾರ ಸೂಕ್ತ ಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡಲು ಒಪ್ಪಿಗೆ ಸೂಚಿಸಿತು.

ಕಾಪು‌ : ಬಿಲ್ಲವ ಸಮಾಜದ ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವ ಭರವಸೆ ನೀಡಿದ ಸಿಎಂ ಬೊಮ್ಮಾಯಿ – Vishwanews24

Leave a Reply