Featured

ಹಿಜಾಬ್ ವಿವಾದ : ಯಾವುದೇ ಧರ್ಮದವರು ಅವರವರ ಧರ್ಮ ಆಚರಣೆ ಮಾಡಲು ಶಾಲೆಗೆ ಬರುವುದಲ್ಲ : ಆರಗ ಜ್ಞಾನೇಂದ್ರ – Vishwanews24

ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ ..

ಶಾಲೆ ಕಾಂಪೌಂಡ್ ಒಳಗೆ ಹಿಜಾಬ್, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು ..

ಹಿಜಾಬ್ ಹಿಂದೆ ಇರುವ ಮತೀಯ ಸಂಘಟನೆಗಳ ಬಗ್ಗೆ ಗಮನ ಕೊಡಲು ಪೊಲೀಸರಿಗೆ ಹೇಳಿದ್ದೇನೆ..

ಬೆಂಗಳೂರು : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ‌.

ಸುದ್ದಿಗಾರರ ಜತೆ ಮಾತನಾಡಿದ ಅವರು,ವಿದ್ಯಾರ್ಥಿಗಳು ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರ ಕಲಿಯಲು ಒಳ್ಳೆಯದಾಗುತ್ತದೆ.ಧರ್ಮ ಆಚರಣೆಗೆ ಪೂಜೆ ಪುನಸ್ಕಾರಕ್ಕೆ ಚರ್ಚ್, ಮಸೀದಿ, ದೇವಸ್ಥಾನಗಳಿವೆ.ಅಲ್ಲಿ ಏನು ಮಾಡಲೂ ನಾವು ಸ್ವತಂತ್ರರು ಎಂದರು.

ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯದಿದ್ದರೆ ಹೇಗಾಗುತ್ತದೆ? ಎಲ್ಲರೂ ಕೂಡಾ ಈ ಬಗ್ಗೆ ಯೋಚನೆ ಮಾಡಬೇಕು ಎಂದರು.

ಹಿಜಾಬ್ ಹಿಂದೆ ಇರುವ ಮತೀಯ ಸಂಘಟನೆಗಳ ಬಗ್ಗೆ ಗಮನ ಕೊಡಲು ಪೊಲೀಸರಿಗೆ ಹೇಳಿದ್ದೇನೆ. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಯಾವುದೇ ಧರ್ಮದವರು ಅವರವರ ಧರ್ಮ ಆಚರಣೆ ಮಾಡಲು ಶಾಲೆಗೆ ಬರುವುದಲ್ಲ.ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು ಎಂದು ಅಭಿಪ್ರಾಯಪಟ್ಟರು.

ಶಾಲೆ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು.ಶಾಲಾ ಮ್ಯಾನೇಜ್ ಮೆಂಟ್ ಹೇಳುವ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ :

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

9 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

9 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

9 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

10 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

11 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

11 hours ago