Featured

ಹಿಜಾಬ್ ವಿವಾದ: ‘ಸುಪ್ರೀಂ ಕೋರ್ಟ್’ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ -Vishwanews24

ಹಿಜಾಬ್ ವಿವಾದ: ‘ಸುಪ್ರೀಂ ಕೋರ್ಟ್’ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಅಲ್ಲದೇ ಸುಪ್ರೀಂ ಕೋರ್ಟ್ ಮುಂದಿನ ಅರ್ಜಿಯನ್ನು ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ.

ರಾಜ್ಯಾಧ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ  ಸಂಬಂಧ ಕರ್ನಾಟಕ ಹೈಕೋರ್ಟ್  ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು, ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು.. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.  ಲಿವಾ ಮಿಸ್​ ದಿವಾ ಯೂನಿವರ್ಸ್​ 2022 ಕಿರೀಟವನ್ನು ಮುಡುಗೇರಿಸಿಕೊಂಡ ಮಂಗಳೂರು ಮೂಲದ ದಿವಿತಾ ರೈ – Vishwanews24 

ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾಧ್ಯಂತ ವ್ಯಾಪಿಸಿ, ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಹೈಕೋರ್ಟ್, ಮಾರ್ಚ್ 15ರ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ, ಕರ್ನಾಟಕಕ್ಕೆ ನೋಟಿಸ್ ಜಾರಿಗೊಳಿಸಿತು. ಈ ಬಳಿಕ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.

ಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ‌ ದೌರ್ಜನ್ಯ – ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಪೊಲೀಸ್ ವಶಕ್ಕೆ – Vishwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

22 hours ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

23 hours ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

23 hours ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

24 hours ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

24 hours ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago