ಬೆಂಗಳೂರು: ರಾಜ್ಯದೆಲ್ಲೆಡೆ ಹಿಜಾಬ್-ಕೇಸರಿ ಶಾಲು ಸಂಘರ್ಷ ಹೆಚ್ಚಾಗುತ್ತಿದೆ. ನಿನ್ನೆ (ಫೆ.08) ಕಾಲೇಜುಗಳಲ್ಲಿ ವಿದ್ಯಾರ್ಥಿಗಳು (Students) ಹೋರಾಟ ಮಾಡಿದ್ದರು. ಧರಣಿಯಲ್ಲಿ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಹಲವರಿಗೆ ಗಾಯಗಳಾಗಿವೆ. ಪರ-ವಿರೋಧ ಹೆಸರಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು ದಾಂಧಲೆ ನಡೆಸಿದ್ದರು. ಶಿವಮೊಗ್ಗ, ದಾವಣಗೆರೆ, ಬನಹಟ್ಟಿ ಸಂಪೂರ್ಣ ರಣಾಂಗಣವಾಗಿತ್ತು. ನಿನ್ನೆ ಕರ್ನಾಟಕ ಹೈಕೋರ್ಟ್ (High Court) ಹಿಜಾಬ್ (Hijab) ವಿವಾದದ ಬಗ್ಗೆ ವಿಚಾರಣೆ ನಡೆಸಿದೆ. ಇಂದು ಇತ್ಯರ್ಥವಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹಿಜಾಬ್ ವಿವಾದ ಬಗ್ಗೆ ಚರ್ಚೆ ನಡೆಸಲಾಗುವುದು. ಸದ್ಯ ವಿದ್ಯಾರ್ಥಿಗಳ ಹೋರಾಟವನ್ನು ತಣ್ಣಗಾಗಿಸಲು ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶಾಲೆ- ಕಾಲೇಜುಗಳಿಗೆ ಗಜೆ ಘೋಷಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…