ಶಿಮ್ಲಾ :ಹಿಮಾಚಲ ಪ್ರದೇಶ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಿನ್ನಲೆ ಇದೀಗ ಎಲ್ಲಾ ರಾಜ್ಯ ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು ಮತ್ತು ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳ ವರೆಗೆ ಯಾವುದೇ ವೇತನ ಹಾಗೂ ಭತ್ಯೆ ನೀಡಲಾಗುವುದಿಲ್ಲ ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯವು ಉತ್ತಮ ಸುಧಾರಣೆ ಕಾಣಬೇಕಿದೆ. ಆದ್ದರಿಂದ ಮುಂದಿನ 2 ತಿಂಗಳು ಯಾವುದೇ ಸಂಬಳ, ಟಿಎ, ಡಿಎ ತೆಗೆದುಕೊಳ್ಳುವುದಿಲ್ಲ ಅಂತ ಸಂಪುಟದ ಎಲ್ಲಾ ಸದಸ್ಯರು ನಿರ್ಧಸಿರುವುದಾಗಿ ಸಿಎಂ ತಿಳಿಸಿದ್ದಾರೆ.
ಅಲ್ಲದೇ ವೇತನ ಉಳಿತಾಯವು ಒಂದು ಸಣ್ಣ ಮೊತ್ತವಾಗಿದೆ. ಇದರ ಹೊರತಾಗಿ ಎಲ್ಲಾ ಶಾಸಕರು ಸಹ ಕೊಡುಗೆ ನೀಡಬೇಕೆಂದು ನಾನು ವಿನಂತಿಸುತ್ತೇನೆ ಎಂದೂ ಸಹ ಅವರು ಮನವಿ ಮಾಡಿದ್ದಾರೆ.
ಹಳೆಯ ಪಿಂಚಣಿ ಯೋಜನೆ , ಮಹಿಳೆಯರಿಗೆ 1,500 ರೂ. ಪಾವತಿಸುವ ಗ್ಯಾರಂಟಿ ಯೋಜನೆ, ಉಚಿತ ವಿದ್ಯುತ್ ಈ ಯೋಜನೆಗಳಿಂದಾಗಿ 86,589 ಕೋಟಿ ರೂ. ಸಾಲದ ಹೊರೆಯಾಗಿದೆ ಎಂದು ವರದಿಯಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…