ಶಿಮ್ಲಾ: ಕೇರಳ, ಈಶಾನ್ಯ ಭಾರತ ಆಯ್ತು ಇದೀಗ ಹಿಮಾಚಲ ಪ್ರದೇಶದಲ್ಲಿ ವರುಣರಾಯ ರೌದ್ರಾವತಾರ ತೋರುತ್ತಿದ್ದಾನೆ. ಭಾರಿ ಮಳೆಗೆ ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಮನಾಲಿ ಅಕ್ಷರಶಃ ತತ್ತರಿಸಿ ಹೋಗಿದೆ.
ಮನಾಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 127.4 ಮಿ.ಮೀ. ಮಳೆಯಾಗಿದೆ. ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮನಾಲಿ ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿದೆ. ಅಲ್ಲದೆ ಭಾರಿ ಮಳೆಗೆ ಭೂಕುಸಿತ ಉಂಟಾಗಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಬಿಯಾಸ್ ನದಿ ತುಂಬಿ ಹರಿಯುತ್ತಿದ್ದು, ದಡದಲ್ಲಿ ನಿಂತಿದ್ದ ಟೂರಿಸ್ಟ್ ಬಸ್ ಒಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಈ ದೃಶ್ಯ ಕ್ಯಾಮರಾಗಳಲ್ಲಿ ಸೆರೆಯಾಗಿದೆ.
ಅದೃಷ್ಟವಶಾತ್ ಬಸ್ ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲವಾದ್ದರಿಂದ ನಡೆಯಬಹುದಾಗಿದ್ದ ಭಾರಿ ದುರಂತವೊಂದು ತಪ್ಪಿದೆ. ಇನ್ನು ಕೆಲವು ಟ್ರಕ್ಗಳು ಪ್ರವಾಹದಲ್ಲಿ ಸಿಲುಕಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಬಿಯಾಸ್ ನದಿಯು ಮಂಡಿ ಜಿಲ್ಲೆಯ ಚಂಡೀಗರ್-ಮೊನಾಲಿ ರಾಷ್ಟ್ರೀಯ ಹೆದ್ದಾರಿ 21ರಲ್ಲಿ ಅಪಾಯದ ಸುಳಿವು ನೀಡಿದ್ದು, ರಸ್ತೆಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…